ಉದಯವಾಹಿನಿ, ಬೆಂಗಳೂರು: ಭೇಟಿ ಮಾಡಲು ಬಂದ ಬಂದ ಪ್ರಿಯಕರನನ್ನು ಅಪಹರಣ ಮಾಡಿಸಿ ಸುಲಿಗೆ ಮಾಡಿದ್ದ ಪ್ರಿಯತಮೆ ಸಿನಿಮೀಯ ರೀತಿಯಲ್ಲಿ ಕೋರಮಂಗಲ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ.ಪ್ರಿಯತಮೆಯೇ ಸುಲಿಗೆ ಹಿಂದಿನ ಕಿಂಗ್‌ಪಿನ್ ಎಂದು ತಿಳಿದು ಪ್ರಿಯಕರ ಬೆಚ್ಚಿಬಿದ್ದಿದ್ದಾನೆ.
ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ಶಿವ ಮತ್ತು ಮೋನಿಕಾ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಎಲ್ಲವೂ ಚೆನ್ನಾಗಿಯೇ ಇತ್ತು. ಹೀಗಿರುವಾಗ ಶಿವನಿಗೆ ಕರೆ ಮಾಡಿ ನನ್ನ ಸ್ನೇಹಿತರು ನಿನ್ನ ನೋಡಬೇಕಂತೆ, ನಿನ್ನ ಬಳಿಯಿರುವ ಚಿನ್ನಾಭರಣ ಹಾಕಿಕೊಂಡು ಇನ್ನೋವಾ ಕಾರಿನಲ್ಲಿ ಬಾ ಎಂದು ಪ್ರಿಯತಮೆ ಫೋನ್ ಮಾಡಿದ್ದಾಳೆ.
ಮೋನಿಕಾ ಮಾತು ನಂಬಿದ ಪ್ರಿಯಕರ ೬೦ ಗ್ರಾಂ ಚಿನ್ನಾಭರಣದ ಜೊತೆಗೆ ಇನ್ನೋವಾ ಕಾರಿನಲ್ಲಿ ಬಂದಿದ್ದಾಗ ಮೋನಿಕಾ ಅಂಡ್ ಗ್ಯಾಂಗ್ ಶಿವನನ್ನ ಅಪಹರಣ ಮಾಡಿ ಮೈಮೇಲಿದ್ದ ಚಿನ್ನಾಭರಣ ದೋಚಿ ೧೦ ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಆದರೆ ಪ್ರಿಯತಮೆ ಶಿವನಿಗೆ ೫ ಲಕ್ಷ ರೂ. ಕೊಡಲು ಒಪ್ಪಿಸಿದ್ದಳು. ಎಟಿಎಂ ಕಾರ್ಡ್ ಮೆಜೆಸ್ಟಿಕ್ ಅಡ್ರೆಸ್‌ಗೆ ಕೋರಿಯರ್ ಮಾಡಿಸಿಕೊಡು ಕೋರಮಂಗಲಕ್ಕೆ ಹಣ ಡ್ರಾ ಮಾಡಿಕೊಳ್ಳಲು ಬಂದಿದ್ದರು.
ಆದರೆ ಕೋರಮಂಗಲದ ಎಟಿಎಂನಲ್ಲಿ ಹಣ ಡ್ರಾ ಮಾಡುವ ವೇಳೆ ಆರೋಪಿಗಳ ಮಧ್ಯೆ ಗಲಾಟೆ ನಡೆದಿದೆ. ಇದೇ ವೇಳೆ ರೌಂಡ್ಸ್‌ನಲ್ಲಿದ್ದ ಪಿಎಸ್‌ಐ ಮಾದೇಶ್ ಅನುಮಾನಗೊಂಡು ವಿಚಾರಣೆ ನಡೆಸಿದಾಗ ಕಿಡ್ನ್ಯಾಪ್ ಮತ್ತು ಸುಲಿಗೆ ಪ್ರಕರಣ ಬೆಳಕಿಗೆ ಬಂದಿದೆ.
ಪ್ರಕರಣ ದಾಖಲಿಸಿಕೊಂಡಿರುವ ಕೋರಮಂಗಲ ಪೊಲೀಸರು ಆರೋಪಿಗಳಾದ ಮೋನಿಕಾ, ಹರೀಶ್, ಹರಿಕೃಷ್ಣ, ನರೇಶ್, ರಾಜ್ ಕುಮಾರ್, ನರಸಿಂಹ, ಅಂಜನೀಲ್‌ನನ್ನು ಬಂಧಿಸಿದ್ದಾರೆ. ಬಂಧಿತ ಏಳು ಮಂದಿಯೂ ಆಂಧ್ರದ ನೆಲ್ಲೂರು ಮೂಲದವರು ಎಂದು ತಿಳಿಸಿದ್ದಾರೆ.
