ಉದಯವಾಹಿನಿ, ಬೆಂಗಳೂರು: ನಾಡದೇವಿ ಮೈಸೂರಿನ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಿಸುವ ಸಂಬಂಧ ಪರಿಶೀಲಿಸಿ, ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂದಾಯ ಇಲಾಖೆ ಧಾರ್ಮಿಕ ದತ್ತಿ ವಿಭಾಗದ ಪ್ರಧಾನ ಕಾರ್ಯದರ್ಶಿ ಅವರಿಗೆ ಆದೇಶಿಸಿದ್ದಾರೆ. ಈ ಸಂಬಂಧ ಶಾಸಕ ದಿನೇಶ್ ಗೂಳಿಗೌಡ ಅವರ ಮನವಿಯನ್ನು ಪರಿಗಣಿಸಿ ಅಧಿಕಾರಿಗಳಿಗೆ ಸಿಎಂ ಈ ಆದೇಶ ನೀಡಿದ್ದಾರೆ.ನಾಡದೇವಿಗೆ ಚಿನ್ನದ ರಥ ನಿರ್ಮಿಸಬೇಕು ಎಂಬ ಭಕ್ತರ, ಬೇಡಿಕೆಯನ್ನು ಅರಿತು, ಸಂಕಲ್ಪ ಮಾಡಿಕೊಂಡು ಪ್ರಯತ್ನಿಸಲಾಗಿತ್ತು. ಸಿಎಂ ಆದೇಶದಿಂದ ಈಗ ಆ ಪ್ರಯತ್ನದಲ್ಲಿ ಮೊದಲ ಹೆಜ್ಜೆಯನ್ನು ಇಟ್ಟಂತಾಗಿದೆ.

ಚಾಮುಂಡೇಶ್ವರಿ ದೇವಿ ಕನ್ನಡ ನಾಡಿನ ಅಸಿತೆಯಾಗಿದ್ದಾಳೆ. ಕನ್ನಡಿಗರ ಧಾರ್ಮಿಕ ಪ್ರತಿನಿಧಿಯಾಗಿದ್ದಾಳೆ, ಮೈಸೂರಿನ ಚಾಮುಂಡಿ ಬೆಟ್ಟಕ್ಕೆ, ದೇವಸ್ಥಾನಕ್ಕೆ, ದೇವಿಗೆ ಪೌರಾಣಿಕ, ಐತಿಹಾಸಿಕ ಹಿನ್ನೆಲೆ ಇದೆ. ಅದಕ್ಕಾಗಿಯೇ ಮೈಸೂರಿನಲ್ಲಿ ನಡೆಯುವ ದಸರಾವನ್ನು ನಾಡ ಹಬ್ಬ ಎಂದು ಕರೆಯಲಾಗುತ್ತದೆ. ಈ ನಾಡದೇವಿಯನ್ನು ಚಿನ್ನದ ರಥದಲ್ಲಿ ಕೂರಿಸಿ ಮೆರೆಸಬೇಕು ಎಂಬುದು ಭಕ್ತ ಕೋಟಿಯ ಬೇಡಿಕೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರನ್ನು ಖುದ್ದಾಗಿ ಭೇಟಿಯಾಗಿ ಬೇಡಿಕೆ ಸಲ್ಲಿಸಿ, ಕೆಲವು ಸಲಹೆ ನೀಡಲಾಗಿತ್ತು. ಚಿನ್ನದ ರಥ ನಿರ್ಮಿಸುವ ವೆಚ್ಚವನ್ನು ಸರ್ಕಾರ ಪಾಲು ಮತ್ತು ಚಿನ್ನದ ರಥ ನಿರ್ಮಾಣಕ್ಕೆ ಬೇಕಾದ ಅಂದಾಜು ವೆಚ್ಚದ ಪ್ರಸ್ತಾವನೆಯನ್ನು ಸರ್ಕಾರ ತಯಾರಿಸಬೇಕು. ದೇವಸ್ಥಾನದಲ್ಲಿ ಈ ಉದ್ದೇಶಕ್ಕೋಸ್ಕರ ಪ್ರತ್ಯೇಕ ಹುಂಡಿಯೊಂದನ್ನು ಇಡಬೇಕು. ಭಕ್ತರು ಅದರಲ್ಲಿ ಹಣ ಹಾಗೂ ಚಿನ್ನವನ್ನು ಹಾಕಲು ಅವಕಾಶ ನೀಡಬೇಕು. ಸಂಗ್ರಹಿತ ಕಾಣಿಕೆ ಹಣಕ್ಕಿಂತ ಹೆಚ್ಚಿಗೆ ಬೇಕಾಗುವ ಹಣವನ್ನು ಸರ್ಕಾರ ಭರಿಸಬೇಕು ಎಂದು ಮನವಿ ನೀಡ್ದೆಿ ಎಂದು ದಿನೇಶ್ ಗೂಳಿಗೌಡ ಅವರು ಹೇಳಿದ್ದಾರೆ. ಅದಕ್ಕೆ ಮುಖ್ಯಮಂತ್ರಿಗಳು ಸಕಾರಾತಕವಾಗಿ ಸ್ಪಂದಿಸಿ ಆದೇಶ ನೀಡಿರುವುದು ಸಂತಸ ತಂದಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!