ಉದಯವಾಹಿನಿ,ಹಾವೇರಿ, : ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಈಗಾಗಲೇ ನೀಡಿರುವ ಗ್ಯಾರೆಂಟಿ ಯೋಜನೆಗಳ ಜಾರಿ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಸೇರಿದಂತೆ ಬಿಜೆಪಿ, ಜೆಡಿಎಸ್ ವರಿಷ್ಠರು ಯೋಜನೆಗಳ್ನು ಹೇಗೆ ಜಾರಿ ಮಾಡುತ್ತಾರೆ ಎಂದು ಕಾಯುತ್ತಿದ್ದಾರೆ.ಬುಧವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಗ್ಯಾರಂಟಿ ಜಾರಿ ಕುರಿತು ಯಾವ ತೀರ್ಮಾನ ಕೈಗೊಂಡಿಲ್ಲ. ಈ ಕುರಿತು ಪ್ರತಿಕ್ರಿಯಿಸಿರುವ ಬಸವರಾಜ ಬೊಮ್ಮಾಯಿ ಅವರು, ಶುಕ್ರವಾರ ಮತ್ತೆ ಸಂಪುಟ ಸಭೆ ನಡೆಯಲಿದೆ. ಈ ವೇಳೆ ಗ್ಯಾರಂಟಿ ಜಾರಿ ಬಗ್ಗೆ ಯಾವ ತೀರ್ಮಾನ ಕೈಗೊಳ್ಳುತ್ತಾರೋ ನೋಡೋಣ. ಅಲ್ಲಿಯವರೆಗೆ ಕಾಯೋಣ ಎಂದು ಹೇಳಿದ್ದಾರೆ.
ಹಾವೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ನೀಡಿದ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಮುಖ್ಯಮಂತ್ರಿಗಳು ಸಭೆ ಮಾಡಲಿ. ಮುಂದಿನ ಸಂಪುಟ ಸಭೆಯಲ್ಲಿ ಈ ಬಗ್ಗೆ ಸರ್ಕಾರ ಕೈಗೊಳ್ಳುವ ನೀರ್ಣಯದ ಬಗ್ಗೆ ಗೊತ್ತಾಗಲಿದೆ ಎಂದರು.ಏನೇನು ಯೋಜನೆಳನ್ನು ಜಾರಿ ಮಾಡುತ್ತಾರೋ ಮಾಹಿತಿ ಇಲ್ಲ. ಯಾವುದಕ್ಕೆಲ್ಲ ಹೇಗೆ ಷರತ್ತುಗಳನ್ನು ವಿಧಿಸುತ್ತಾರೋ ಕಾದು ನೋಡಬೇಕಿದೆ. ಶುಕ್ರವಾರ ಈ ಬಗ್ಗೆ ಸಷ್ಟತೆ ದೊರೆಯುವ ಸಾಧ್ಯತೆ ಇದೆ. ಅಲ್ಲಿಯವರೆಗೆ ಕಾದು ನೋಡೋಣ ಎಂದು ತಿಳಿಸಿದರು.
