ಉದಯವಾಹಿನಿ, ಬ್ಯಾಡಗಿ: ಅಂತರಾಷ್ಟ್ರೀಯ ಮೆಣಸಿನಕಾಯಿ ಮಾರುಕಟ್ಟೆಗೆ ಸೋಮವಾರ ೩೦,೨೧೩ ಚೀಲ ೭,೫೫೩ ಕ್ವಿಂಟಲ್ ಮೆಣಸಿಕಾಯಿ
ಅಂತರಾಷ್ಟ್ರೀಯ ಮೆಣಸಿನಕಾಯಿ ಮಾರುಕಟ್ಟೆಗೆ 30,213 ℃ (7,553 ) ಮಾರಾಟಕ್ಕೆ ತರಲಾಗಿದ್ದು, ಆವಕದಲ್ಲಿ ತುಸು ಹೆಚ್ಚಳ ಕಂಡು ಬಂದಿದೆ. ಆದರೆ ಬೆಲೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದೆ. ಕಳೆದ ಗುರುವಾರ ಮಾರುಕಟ್ಟೆಗೆ 27,486 ಚೀಲ (6,871 ಕ್ವಿಂಟಲ್) ಆವಕವಾಗಿತ್ತು. ಸೋಮವಾರ ಮಾರುಕಟ್ಟೆಗೆ ಒಟ್ಟು 4,070 ಲಾಟ್ ಮೆಣಸಿನಕಾಯಿ ಚೀಲಗಳನ್ನು ಟೆಂಡರ್‌ಗೆ ಇಡಲಾಗಿದ್ದು, ಈ ಪೈಕಿ ತೇವಾಂಶ ಹೆಚ್ಚಿರುವ ಹಾಗೂ ಗುಣಮಟ್ಟದ ಕೊರತೆ ಇರುವ 474 ಲಾಟ್‌ಗಳಿಗೆ ವರ್ತಕರು ಟೆಂಡರ್ ನಮೂದಿಸಿಲ್ಲ.
6 ಚೀಲ ಡಬ್ಬಿ ಮೆಣಸಿನಕಾಯಿ ₹ 28,009ರಂತೆ, 21 ಚೀಲ ಕಡ್ಡಿ ಮೆಣಸಿನಕಾಯಿ ₹ 27,400 ರಂತೆ ಮತ್ತು ಗುಂಟೂರು ತಳಿ ಮೆಣಸಿನಕಾಯಿ ₹ 16,909 ರಂತೆ ಗರಿಷ್ಠ ಬೆಲೆಯಲ್ಲಿ ಮಾರಾಟವಾಗಿವೆ. ಸರಾಸರಿ ಬೆಲೆಯಲ್ಲಿ ಬ್ಯಾಡಗಿ ಡಬ್ಬಿ ₹ 23,669, ಬ್ಯಾಡಗಿ ಕಡ್ಡಿ * 22,817 ಹಾಗೂ ಗುಂಟೂರ ತಳಿ ₹ 13,009 ರಂತೆ ಮಾರಾಟವಾಗಿವೆ. ಇಂದಿನ ಟೆಂಡರ್ ಪ್ರಕ್ರಿಯೆಯಲ್ಲಿ ಒಟ್ಟು 221 ಖರೀದಿ ವರ್ತಕರು ಪಾಲ್ಗೊಂಡಿದ್ದರು ಎಂದು ಎಪಿಎಂಸಿ ಮೂಲಗಳು ತಿಳಿಸಿವೆ.
