ಉದಯವಾಹಿನಿ, ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಫೆಂಗಲ್ ಚಂಡಮಾರುತ ಅಪ್ಪಳಿಸಲಿದೆ.
ಕರ್ನಾಟಕದಲ್ಲೂ ಫೆಂಗಲ್ ಚಂಡಮಾರುತ ತನ್ನ ಪ್ರಭಾವ ಬೀರಲಿದ್ದು ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಚಳಿಗಾಲದ ಮಧ್ಯೆ ಮತ್ತೆ ಚಂಡಮಾರುತ ಎದುರಾಗುವ ಭೀತಿ ಉಂಟಾಗಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಡಿಸೆಂಬರ್ ೧ರಿಂದ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಮತ್ತು ರಾಮನಗರದಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಇಲಾಖೆ ತಿಳಿಸಿದೆ.
