ಉದಯವಾಹಿನಿ, ಬೆಂಗಳೂರು: ರಾಜ್ಯದಲ್ಲಿ ವಸತಿ ಖಾತೆಯಲ್ಲಿ ನಿರ್ಮಿಸಲಾಗುತ್ತಿರುವ ಬಡಾವಣೆಗಳಲ್ಲಿ ತ್ಯಾಜ್ಯ ಸಂಸ್ಕರಣೆಗೆ ಅರ್ಧ ಎಕರೆ ಜಾಗವನ್ನು ಮೀಸಲಿಡುವಂತೆ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಸ್. ಈ. ಸುಧೀಂದ್ರ ಅವರು ಸಚಿವ ಜಮೀರ್ ಅಹ್ಮದ್ ಅವರಿಗೆ ಮನವಿ ಮಾಡಿದ್ದಾರೆ.

ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯು ಜೈವಿಕ ಇಂಧನಗಳಾದ ಕಂಪ್ರೆಸ್ಟ್ ಬಯೋಗ್ಯಾಸ್, ಬಯೋಡಿಜಿಲ್, ೨ಉ ಎಥನಾಲ್ ಮುಂತಾದವುಗಳ ಉತ್ಪಾದನೆಗೆ ಅಗತ್ಯ ಕಚ್ಚಾ ವಸ್ತುಗಳ ಸಂಗ್ರಹಣೆ, ಶೇಖರಣೆ ಹಾಗೂ ಸಂಸ್ಕಾರಣೆಗೆ ಒತ್ತು ನೀಡಿ ಕಾರ್ಯನಿರ್ವಹಿಸುತ್ತಿದೆ.ಮಂಡಳಿಯು ಕೃಷಿ ಹಾಗೂ ಎಮ್‌ಎಸ್‌ಡಬ್ಲ್ಯೂಗಳ ಸಂಸ್ಕರಣೆಯಿಂದ ಕಂಪ್ರೆಸ್ ಬಯೋ ಗ್ಯಾಸ್ ಉತ್ಪಾದನೆಗೆ ಒತ್ತು ನೀಡಿ ನೂತನ ಜೈವಿಕ ಇಂಧನ ನೀತಿಯನ್ನು ರೂಪಿಸುತ್ತಿದ್ದು ಹೆಚ್ಚಿನ ಪ್ರಮಾಣದ ಉತ್ಪಾದನಾ ಘಟಕಗಳನ್ನು ಆರಂಭಿಸುವುದು ಇಂದಿನ ಅವಶ್ಯಕತೆಯಾಗಿದ್ದು ಈ ಕುರಿತು ಮಂಡಳಿಯು ಕ್ರಿಯಾಶೀಲವಾಗಿ ಕಾರ್ಯನಿರತವಾಗಿದೆ.
ಈ ಕೇಂದ್ರಗಳನ್ನು ತ್ಯಾಜ್ಯ ಸಂಸ್ಕರಣೆ ಘಟಕಗಳ ನಿರ್ವಹಣೆಯಲ್ಲಿ ಪರಿಣಾಮಕಾರಿಯಾಗಿ ಬಳಸಿಕೊಳ್ಳುವುದರಿಂದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಸೃಜನೆಗೂ ಅವಕಾಶವಾಗಲಿದೆ.

Leave a Reply

Your email address will not be published. Required fields are marked *

error: Content is protected !!