ಉದಯವಾಹಿನಿ, ಮೈಸೂರು: ಕ್ರೀಡೆ ಜೀವನ ಪಾಠ ಹೇಳಿಕೊಡುತ್ತದೆ. ತಾಳ್ಮೆ, ಗುರಿ ತಲುಪುವ ಪರಿಶ್ರಮ ಹಾಗೂ ಒಗ್ಗಟ್ಟಿನ ಮೌಲ್ಯವನ್ನು ತಿಳಿಯಲು ಸಾಧ್ಯ. ನಿತ್ಯ ಒತ್ತಡದಲ್ಲಿ ಕೆಲಸ ಮಾಡುವ ಪೊಲೀಸರು ಕ್ರೀಡೆಗಳಲ್ಲಿ ಭಾಗವಹಿಸಿ ಒತ್ತಡ ಕಡಿಮೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ ತಿಳಿಸಿದರು.
ಚಾಮುಂಡಿಬೆಟ್ಟದ ತಪ್ಪಲಿನ ನಗರ ಸಶಸ್ತ್ರ ಮೀಸಲು ಪಡೆಯ ಮೈದಾನದಲ್ಲಿ ಮೂರು ದಿನಗಳ ಕಾಲ ಆಯೋಜಿಸಿರುವ ವಾರ್ಷಿಕ ಕ್ರೀಡಾಕೂಟವನ್ನು ಜಿಲ್ಲಾಧಿಕಾರಿ ಜಿ.ಲಕ್ಷ್ನೀಕಾಂತ್‍ರೆಡ್ಡಿ ಬಲೂನು, ಪಾರಿವಾಳ ಹಾರಿ ಬಿಡುವುದರ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪೆÇಲೀಸ್ ಇಲಾಖೆಯಲ್ಲಿ ನಿತ್ಯ ಒತ್ತಡ ಇರುತ್ತದೆ. ಅದರೊಳಗೆ ತಾಳ್ಮೆಯಿಂದ ಕೆಲಸ ನಿರ್ವಹಣೆ ಮಾಡಬೇಕಾದ ಸವಾಲು ಅಧಿಕಾರಿ, ಸಿಬ್ಬಂದಿಗೆ ಇದೆ. ಕ್ರೀಡಾಕೂಟಗಳು ನಿತ್ಯದ ಒತ್ತಡದಿಂದ ಹೊರಬರಲು ಸಹಕಾರಿಯಾಗುತ್ತದೆ ಎಂದರು.
ಇಲಾಖೆಯಲ್ಲಿ ಕ್ಲಿಷ್ಟಕರ ಸಮಸ್ಯೆ ಎದುರಿಸುವಾಗ ಇಲ್ಲಿ ಕಲಿತ ಕೆಲವು ಪಾಠಗಳು ಸಹಾಯಕ್ಕೆ ಬರಬಹುದು ಎಂದು ಅಭಿಪ್ರಾಯಪಟ್ಟರು. ದಿನದ 24 ಗಂಟೆಗಳ ಕಾಲ ಸಾರ್ವಜನಿಕರ ಆಸ್ತಿ-ಪ್ರಾಸ್ತಿ, ಪ್ರಾಣ ರಕ್ಷಣೆಗಾಗಿ ಕೆಲಸ ಮಾಡುವ ಪೆÇಲೀಸರು ತಮ್ಮೆಲ್ಲಾ ಕೆಲಸಗಳನ್ನು ಬದಿಗೊತ್ತಿ ಮೈಸೂರು ನಗರ ಪೆÇಲೀಸ್ ವಾರ್ಷಿಕ ಕ್ರೀಡಾಕೂಟದಲ್ಲಿ ಪಾಲ್ಗೊಂಡು ವಿವಿಧ ಆಟೋಟಗಳಲ್ಲಿ ಸ್ಪರ್ಧಿಸಿ ಗೆಲುವಿನ ನಗೆ ಬೀರಿದರು.
