ಉದಯವಾಹಿನಿ, ಬೆಂಗಳೂರು: ಉಪಚುನಾ ವಣೆಯ ಗೆಲುವಿನ ಹುಮಸ್ಸಿನಲ್ಲೇ ಜೆಡಿಎಸ್ ಪ್ರಾಬಲ್ಯವಿರುವ ಹಾಸನದಲ್ಲಿ ಸ್ವಾಭಿಮಾನಿ ಸಮಾವೇಶ ನಡೆಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಎದುರಾಳಿಗಳಿಗೆ ಠಕ್ಕರ್ ನೀಡಲು ಸಜ್ಜುಗೊಳ್ಳುಎತ್ತಿರುವ ಜೊತೆಯಲ್ಲೇ, ಕಾಂಗ್ರೆಸ್ ಪಕ್ಷದ ಬುನಾದಿಯನ್ನು ಗಟ್ಟಿಗೊಳಿಸಲು ಯೋಜನೆ ರೂಪಿಸಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಗೆಲ್ಲುವ ಮೂಲಕ ರಾಮನಗರ ಜಿಲ್ಲೆಯಲ್ಲಿ ಜೆಡಿಎಸ್ ಪ್ರಾಬಲ್ಯ ತಗ್ಗಿಸುವಲ್ಲಿ ಡಿ.ಕೆ.ಸಹೋದರರು ಯಶಸ್ವಿಯಾಗಿದ್ದಾರೆ.
ಮುಂದುವರೆದ ಭಾಗವಾಗಿ ಹಾಸನದಲ್ಲಿ ಜೆಡಿಎಸ್ ಪ್ರಾಬಲ್ಯವನ್ನು ಕಡಿಮೆ ಮಾಡಿದರೆ ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್, ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ಪೂರಕ ವಾತಾವರಣ ಸೃಷ್ಟಿಯಾಗಲಿದೆ ಎಂಬ ಲೆಕ್ಕಾಚಾರಗಳಿವೆ.
ಈ ಮೂಲಕ ದೇಶದ ಹಲವು ರಾಜ್ಯಗಳಲ್ಲಿರುವಂತೆ ಕರ್ನಾಟಕದಲ್ಲೂ ಪ್ರಾದೇಶಿಕ ಪಕ್ಷದ ಹಿಡಿತವನ್ನು ತಗ್ಗಿಸಲು ಒಳಗೊಳಗೆ ತಯಾರಿಗಳಾಗಿವೆ. ಹಾಸನದ ಸ್ವಾಭಿಮಾನಿ ಸಮಾವೇಶ ಮೇಲ್ನೋಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನದ ವೇದಿಕೆಯಂತೆ ಕಂಡುಬಂದರೂ ಅದರ ಹಿಂದೆ ರಾಜಕೀಯ ಲಾಭ-ನಷ್ಟ ಲೆಕ್ಕಾಚಾರಗಳು ಜೋರಾಗಿ ನಡೆದಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ 2006ರ ನಂತರ ಜೆಡಿಎಸ್ನ ನಾಯಕರೊಂದಿಗೆ ರಾಜಕೀಯ ಜಿದ್ದಾಜಿದ್ದಿಗೆ ಬಿದ್ದಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ತಮದೇ ಆದ ಪ್ರಾಬಲ್ಯವನ್ನು ರೂಢಿಸಿಕೊಂಡು ಎರಡು ಅವಧಿಗೆ ಮುಖ್ಯಮಂತ್ರಿಯಾಗಿದ್ದಾರೆ. ಸಿದ್ದರಾಮಯ್ಯನವರ ವರ್ಚಸ್ಸು ಕಳೆಗುಂದುವಂತಹ ಸನ್ನಿವೇಶಗಳು ಎದುರಾದಾಗಲೆಲ್ಲ ಸ್ವಾಭಿಮಾನಿ ಸಮಾವೇಶಗಳು ಅವರ ಸಾಮರ್ಥ್ಯವನ್ನು ವೃದ್ಧಿಸಿದೆ.

 

Leave a Reply

Your email address will not be published. Required fields are marked *

error: Content is protected !!