ಉದಯವಾಹಿನಿ, ಬೆಂಗಳೂರು: ಮಂಜಾಗ್ರತೆ ಕ್ರಮವಾಗಿ ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ರಿಂಗರ್ ಲ್ಯಾಕ್ಟೇಟ್ ಬಳಕೆಯನ್ನ ತಡೆಹಿಡಿಯಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವುಗಳ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಐವಿ ದ್ರಾವಣದ ಬಗ್ಗೆ ಅನುಮಾನಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆಯ ದೃಷ್ಟಿಯಿಂದ ಬಳಕೆ ತಡೆಹಿಡಿಯಲಾಗಿದೆ ಎಂದು ಸ್ಪಷ್ಟಪಡಿಸಿದರು. ರಿಂಗರ್ ಲ್ಯಾಕ್ಟೇಟ್ ಗ್ಲುಕೋಸ್ ಅನ್ನ ಈ ಹಿಂದಿನಿಂದಲು ಆಸ್ಪತ್ರೆಗಳಲ್ಲಿ ಬಳಕೆ ಮಾಡುತ್ತಾ ಬರಲಾಗುತ್ತಿದೆ. ಈ ಬಾರಿಯೂ ಔಷಧ ಸರಬರಾಜು ನಿಗಮಕ್ಕೆ 192 ಬ್ಯಾಚ್ ಗಳಲ್ಲಿ ಐವಿ ದ್ರಾವಣ ಪೂರೈಕೆಯಾಗಿತ್ತು. ಇದರ ಬಳಕೆ ಸಂದರ್ಭದಲ್ಲಿ ಎರಡು ಬ್ಯಾಚ್ ಗಳ ಬಗ್ಗೆ ಕೆಲವು ಅನುಮಾನಗಳು ವ್ಯಕ್ತವಾದಾಗ ಮುಂಜಾಗ್ರತೆ ದೃಷ್ಟಿಯಿಂದ ಸಂಪೂರ್ಣವಾಗಿ ಎಲ್ಲ 192 ಬ್ಯಾಚ್ ಗಳ ದ್ರಾವಣವನ್ನ ಆಸ್ಪತ್ರೆಗಳಲ್ಲಿ ಬಳಸದಂತೆ ತಡೆಹಿಡಿಯಲಾಗಿತ್ತು. ಆ ಬಳಿಕ ಕಂಪನಿಯವರು ಹೈ ಕೋರ್ಟ್ ನಿಂದ ಆದೇಶ ಪಡೆದ ಹಿನ್ನೆಲೆಯಲ್ಲಿ ಸೆಂಟ್ರಲ್ ಡ್ರಗ್ ಲ್ಯಾಬರೋಟರಿಯಲ್ಲಿ ಟೆಸ್ಟಿಂಗ್ ನಡೆದಾಗ ದ್ರಾವಣ ಬಳಸಬಹುದು ಎಂಬ ವರದಿ ಬಂತು.

Leave a Reply

Your email address will not be published. Required fields are marked *

error: Content is protected !!