
ಉದಯವಾಹಿನಿ, ಬೆಂಗಳೂರು: ಪ್ರತಿಭೆಗಳನ್ನು ಪ್ರೋತ್ಸಾಹಿಸಬೇಕಾಗಿರುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಸ್.ಈ.ಸುಧೀಂದ್ರ ಹೇಳಿದರು.
ಮಲ್ಲೇಶ್ವರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಕರ್ನಾಟಕ ಆರ್ಯ ವೈಶ್ಯ ಮಹಾಸಭಾ ಆಯೋಜಿಸಿದ್ದ ಪ್ರತಿಭೋತ್ಸವ ಹಾಗೂ ಪ್ರತಿಭೋತ್ಸವ ಶೋಭಾ ಯಾತ್ರೆ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಸಮಾಜದ ಪ್ರತಿಭೆಗಳನ್ನು ಹುಡುಕಿ ಈ ಕಾರ್ಯಕ್ರಮದಲ್ಲಿ ಸನ್ಮಾನಿಸುತ್ತಿರುವುದು ಪ್ರತಿಭೋತ್ಸವ ಎಂಬುದಕ್ಕೆ ಅರ್ಥಪೂರ್ಣವಾಗಿದೆ ಎಂದು ಶ್ಲಾಘಿಸಿದರು.
ನಮ್ಮ ಸಮಾಜದ ಪ್ರತಿಭೆಗಳನ್ನು ಹುಡುಕಿ ಈ ಕಾರ್ಯಕ್ರಮದಲ್ಲಿ ಸನ್ಮಾನಿಸುತ್ತಿರುವುದು ಪ್ರತಿಭೋತ್ಸವ ಎಂಬುದಕ್ಕೆ ಅರ್ಥಪೂರ್ಣವಾಗಿದೆ ಎಂದರು.
ರವಿಶಂಕರ್ ಅವರ ಸಮಾಜ ಮುಖಿಯಾಗಿ ಸಮಾಜದ ಏಳಿಗೆಗಾಗಿ ಅವಿರತಶ್ರಮ, ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುತ್ತಿರುವುದು ಅವರು ಆರಂಭಿಸಿ ಮುನ್ನೆಡಿಸಿಕೊಂಡು ಹೋಗುತ್ತಿರುವ ವಾಸವಿ ಕೋ ಆಪರೇಟಿವ್ ಬ್ಯಾಂಕ್, ವಾಸವಿ ಹೌಸಿಂಗ್ ಸೊಸೈಟಿ, ವಾಸವಿ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ, ಹಾಗೂ ಪ್ರಸ್ತುತ ಅಂತರಾಷ್ಟ್ರೀಯ ಮಟ್ಟದ ವಿದ್ಯಾ ಸಂಸ್ಥೆಯನ್ನು ನಿರ್ಮಿಸಲು ಹೊರಟಿರುವುದು ಸಾಕ್ಷಿಯಾಗಿದೆ ಎಂದು ತಿಳಿಸಿದರು.
ಅರ್ಥಪೂರ್ಣ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ನೀಡಿರುವುದು ಹಾಗೂ ಸರ್ಕಾರದಿಂದ ನಮ್ಮ ಸಮಾಜಕ್ಕೆ ಆಗಬೇಕಾಗಿರುವ ಕೆಲಸಗಳನ್ನು ತಮ್ಮೆಲ್ಲರ ಜೊತೆಗೂಡಿ ಅನುಷ್ಠಾನಗೊಳಿಸಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.
