ಉದಯವಾಹಿನಿ, ಬೆಂಗಳೂರು : ಅಮೆರಿಕಾದ ಸ್ಯಾನ್ ಫ್ರಾನ್ಸಿಸ್ಕೋದ ಕಾರ್ಯಕ್ರಮವೊಂದರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಮತ್ತೆ ಟೀಕಿಸಿದ್ದಾರೆ. ಈ ನೆಲದ ಪ್ರಧಾನಿಯನ್ನು ಬೇರೆ ರಾಷ್ಟ್ರದಲ್ಲಿ ತೆಗಳಿದ್ದಕ್ಕೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.ಈ ಸಂಬಂಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ‘ರಾಗಾ’ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಕ್ಯಾಲಿಫೋರ್ನಿಯಾ ವಿಶ್ವಿವಿದ್ಯಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ರಾಹುಲ್ ಗಾಂಧಿ ವ್ಯಂಗವಾಡಿದ್ದಾರೆ. ಕೆಲವರನ್ನು ದೇವರಿಗಿಂತ ದೊಡ್ಡವರೆಂದು ಭಾವಿಸುತ್ತಾರೆ. ಈ ಪೈಕಿ ಪ್ರಧಾನಿ ನರೇಂದ್ರ ಮೋದಿಯವರು ಸಹ ಒಬ್ಬರು ಎಂದು ವಿದೇಶಿ ನೆಲದಲ್ಲಿ ಪ್ರಧಾನಿ ಮೋದಿ ಅವರ ವಿರುದ್ಧ ಮಾತಾಡಿದ್ದಾರೆ.
ಗಾಂಧಿ ಹೆಸರ ನೆರಳಲ್ಲಿ ರಾಜಕೀಯ ಮಾಡುವ ರಾಹುಲ್, ಒಬ್ಬ ಫೇಕ್ ಗಾಂಧಿ ಎಂದು ಟಾಂಗ್ ಕೊಟ್ಟಿದ್ದಾರೆ. ಮಿಸ್ಟರ್ ಫೇಕ್ ಗಾಂಧಿಗೆ ಭಾರತದ ತಿರುಳು ಅದರ ಸಂಸ್ಕೃತಿ ಗೊತ್ತಿಲ್ಲ ಎಂದು ಪ್ರಹ್ಲಾದ್ ಜೋಶಿ ಜರಿದಿದ್ದಾರೆ.
