ಉದಯವಾಹಿನಿ, ಮಂಡ್ಯ: ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಡಿ.2ರಂದು ಸೋಮವಾರ (ಇಂದು) ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ರಜೆಯು ಜಿಲ್ಲೆಯ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ (ದ್ವಿತೀಯ ಪಿಯುಸಿವರೆಗೆ) ಅನ್ವಯವಾಗುತ್ತದೆ. ಈ ರಜಾ ದಿನದ ಕಲಿಕಾ ಪ್ರಕ್ರಿಯೆಯನ್ನು ಮುಂದಿನ ಸರ್ಕಾರಿ ರಜೆ ದಿನಗಳಲ್ಲಿ ಸರಿದೂಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
