ಉದಯವಾಹಿನಿ, ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿ 10 ದಿನ ಕಳೆದಿದ್ದು, ಮಹಾಯುತಿ ಭರ್ಜರಿ ಗೆಲುವು ಸಾಧಿಸಿದರು ಕೂಡ ಹೊಸ ಮುಖ್ಯಮಂತ್ರಿ ಆಯ್ಕೆ ಇನ್ನೂ ಕಗ್ಗಂಟಾಗಿಯೇ ಉಳಿದಿದೆ. ಮಹಾರಾಷ್ಟ್ರ ನಿಯೋಜಿತ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಬಿಜೆಪಿಗೆ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡಲು ಸಿದ್ಧರಾಗಿದ್ದರೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ರಾಜಿ ಸೂತ್ರವನ್ನು ನೀಡಿದ್ದಾರೆ ಮತ್ತು ಈಗಲೂ ಅದಕ್ಕೆ ಅಂಟಿಕೊಂಡಿದ್ದಾರೆ ಎಂದು ಶಿವಸೇನೆ ಮೂಲಗಳು ತಿಳಿಸಿವೆ.
288 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ ಮಹಾಯುತಿ 230 ಸ್ಥಾನಗಳನ್ನು ಗೆದ್ದ ನಂತರ ಅಧಿಕಾರ ಹಂಚಿಕೆ ಕುರಿತು ಚರ್ಚಿಸಲು ಶಿಂಧೆ, ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಅವರು ಗುರುವಾರ ರಾತ್ರಿ ದೆಹಲಿಯಲ್ಲಿ ಅಮಿ ಶಾ ಅವರನ್ನು ಭೇಟಿ ಮಾಡಿದ್ದರು. ತಮ್ಮ ನಾಯಕತ್ವದಲ್ಲಿ ವಿಧಾನಸಭಾ ಚುನಾವಣೆ ನಡೆದಿದ್ದರಿಂದ ಮಹಿಳಾ ಮತದಾರರು, ಮರಾಠರು ಮತ್ತು ಒಬಿಸಿಗಳು, ಲಾಡ್ಲಿ ಬಹೆನಾ ಯೋಜನೆ, ಮೀಸಲಾತಿ ನಿರ್ಧಾರ ಮತ್ತು ವಿವಿಧ ಸಮುದಾಯಗಳಿಗೆ ಸ್ಥಾಪಿಸಲಾದ ಸಹಕಾರ ಮಂಡಳಿಗಳಿಂದಾಗಿ ಮಹಾಯುತಿಗೆ ಮತ ಹಾಕಿದ್ದಾರೆ ಎಂದು ಶಿಂಧೆ ಅವರು ಅಮಿತ್ ಶಾ ಅವರಿಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!