ಉದಯವಾಹಿನಿ , ಕೋಲಾರ : ಏಡ್ಸ್ ಸೋಂಕಿತರಿಗೆ ಸರ್ಕಾರ ನೀಡಿರುವ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನೀಲ್ ಎಸ್.ಹೊಸಮನಿ ತಿಳಿಸಿದರು. ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕೋಲಾರ ಸ್ವಯಂಸೇವಾ ಸಂಸ್ಥೆಗಳಾದ ಸೌಖ್ಯ ಸಂವೃದ್ಧಿ ಸಂಸ್ಥೆ, ಐವೈಡಿ-ಐಡಿಯು, ಸಮ್ಮಿಲನ ಸಂಸ್ಥೆ, ಕೋಲಾರ ಮತ್ತು ವಿವಿಧ ಕಾಲೇಜುಗಳಿಂದವಿಶ್ವ ಏಡ್ಸ್ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ನನ್ನ ಆರೋಗ್ಯ ನನ್ನ ಹಕ್ಕು ಎಂಬ ಘೋಷ ವಾಕ್ಯದೊಂದಿಗೆ ಏಡ್ಸ್ ಸೋಂಕು ತಡೆಗಟ್ಟಲು ಜನಸಾಮಾನ್ಯರಲ್ಲಿ ಸೂಕ್ತ ಅರಿವು ಮೂಡಿಸಬೇಕು ಒಳ್ಳೆಯ ಆರೋಗ್ಯ ಹೊಂದಿರಬೇಕು ಎಂದರೆ ಕೆಟ್ಟ ಹವ್ಯಾಸಗಳನ್ನು ಬಿಟ್ಟು ಒಳ್ಳೆಯ ದಾರಿಯಲ್ಲಿ ನಡೆಯಬೇಕು. ಎಡ್ಸ್ನಿಂದ ಸೋಂಕಿತ ಹಾಗೂ ಕಳಂಕ, ತಾರತಮ್ಯಕ್ಕೊಳಗಾದ ವ್ಯಕ್ತಿಗಳಿಗೆ ನೈತಿಕ ಬೆಂಬಲವನ್ನು ಸೂಚಿಸಲು ಮರಣ ಹೊಂದಿದವರ ನೆನಪಿಗಾಗಿ ಮತ್ತು ಎಲ್ಲರೂ ಒಂದಾಗಿ ಎಡ್ಸ್ ವಿರುದ್ಧ ಹೋರಾಡುವಂತೆ ಪ್ರೇರೇಪಿಸುವ ಸಲುವಾಗಿ ಪ್ರತಿ ಡಿಸೇಂಬರ್ ೧ರಂದು ಆಚರಿಸಲಾಗುತ್ತದೆ. ಸರ್ಕಾರವು ಹೆಚ್.ಐ.ವಿ ಸೋಂಕಿತರಿಗೆ ಹಲವಾರಿ ರೀತಿಯ ಯೋಜನೆಗಳನ್ನು ನೀಡುವುದರ ಮೂಲಕ ಹೆಚ್.ಐ.ವಿ ಸೋಂಕನ್ನು ತಡೆಗಟ್ಟಲು ಮುಂದಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!