ಉದಯವಾಹಿನಿ, ಮಂಗಳೂರು: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ನಿಲ್ಲಬೇಕು ಮತ್ತು ಹಿಂದೂಗಳಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಮಂಗಳೂರಿನಲ್ಲಿ ಮೆರವಣಿಗೆ ನಡೆಯಿತು. ಸಾಧು ಸಂತರ ರಕ್ಷಣೆ ಆಗಬೇಕು, ಮಾನವ ಹಕ್ಕು ರಕ್ಷಿಸಬೇಕು ಎಂದು ಪ್ರತಿಭಟನಕಾರರು ಘೋಷಣೆ ಕೂಗಿದರು. ಡಾ. ಬಿ.ಆರ್. ಅಂಬೇಡ್ಕರ್ ವೃತ್ತ ದಿಂದ ಹೊರಟ ಮೆರವಣಿಗೆ ಮಿನಿ ವಿಧಾನ ಸೌಧದ ಎದುರು ಸಭೆಯಾಗಿ ಪರಿವರ್ತನೆಗೊಂಡಿತು. ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಮಾಣಿಲ ಮಠದ ಮೋಹನದಾಸ ಸ್ವಾಮೀಜಿ, ವಿವಿಧ ಮಠಗಳ ಮಠಾಧೀಶರು, ಇಸ್ಕಾನ್ ಪ್ರಮುಖರು ಭಾಗವಹಿಸಿದ್ದ ಸಭೆಯಲ್ಲಿ ಸಾಮೂಹಿಕ ಹನುಮಾನ್ ಚಾಲೀಸ್ ಪಠಣ ನಡೆಯಿತು.
