ಉದಯವಾಹಿನಿ, ಬೆಂಗಳೂರು: ಮುಡಾ ಪ್ರಕರಣದಲ್ಲಿ ತಮ ವಿರುದ್ಧದ ತನಿಖೆಯನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಲ್ಲಿಸಲಾಗಿದ್ದ ಮೇಲನವಿ ವಿಚಾರಣೆ ನಡೆಸಿದ ಹೈಕೋರ್ಟ್ನ ದ್ವಿಸದಸ್ಯ ಪೀಠ ಮುಂದಿನ ವಿಚಾರಣೆಯನ್ನು ಜ.25ಕ್ಕೆ ಮುಂದೂಡಿದೆ.
ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ಕೆ.ವಿ.ಅರವಿಂದ್ ಅವರ ದ್ವಿಸದಸ್ಯ ಪೀಠದಲ್ಲಿ ನಡೆದ ವಿಚಾರಣೆಗೆ ಘಟಾನುಘಟಿ ವಕೀಲರು ಭಾಗವಹಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ, ಪ್ರೊ.ರವಿವರ್ಮ ಕುಮಾರ್ ವಾದ ಮಂಡಿಸಿದರೆ, ರಾಜ್ಯಸರ್ಕಾರದ ಪರವಾಗಿ ಕಪಿಲ್ ಸಿಬಾಲ್, ಜಮೀನಿನ ಮಾಲೀಕ ದೇವರಾಜ್ ಪರವಾಗಿ ದುಷ್ಯಂತ್ ದವೆ, ದೂರುದಾರರಾದ ಟಿ.ಜೆ.ಅಬ್ರಹಾಂ,
ಸ್ನೇಹಮಯಿ ಕೃಷ್ಣ, ಪ್ರದೀಪ್ ಕುಮಾರ್ ಅವರ ಪರವಾಗಿ ಹಿರಿಯ ವಕೀಲರಾದ ಕೆ.ಜಿ.ರಾಘವನ್, ಮಣಿಧರ್ ಸಿಂಗ್ ವಾದ ಮಂಡಿಸಿದರು.
ಸೆ.24 ರಂದು ಹೈಕೋರ್ಟ್ನ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನೀಡಿರುವ ತೀರ್ಪಿಗೆ ತಡೆಯಾಜ್ಞೆ ನೀಡುವಂತೆ ಹಾಗೂ ಸಿಬಿಐ ತನಿಖೆಗೆ ಸಲ್ಲಿಸಲಾಗಿರುವ ಅರ್ಜಿಯ ಕುರಿತು ಪ್ರಕರಣದ ತನಿಖೆ ಪೂರ್ಣಗೊಳ್ಳುವವರೆಗೂ ಯಾವುದೇ ಆದೇಶ ನೀಡದಂತೆ ಸಿದ್ದರಾಮಯ್ಯ ಅವರ ಪರ ಅಭಿಷೇಕ್ ಮನುಸಿಂಘ್ವಿ ಮನವಿ ಮಾಡಿದ್ದರು.

ಕಾವೇರಿದ ವಾದ-ಪ್ರತಿವಾದದ ನಡುವೆಯೂ ಅಲ್ಲಲ್ಲಿ ವಕೀಲರು ಪರಸ್ಪರ ಕಾಲೆಳೆದುಕೊಳ್ಳುತ್ತಾ, ಹಾಸ್ಯಚಟಾಕಿ ಬಳಸುತ್ತಾ ಕಲಾಪವನ್ನು ಸ್ವಾರಸ್ಯಕರವಾಗಿಸಿದರು.
ಆರಂಭದಲ್ಲೇ ದುಷ್ಯಂತ್ ದವೆ ವಾದ ಮಂಡಿಸಿ, ಈ ಪ್ರಕರಣದಲ್ಲಿ ನಾನು ಕಕ್ಷಿದಾರನಾಗಿಲ್ಲ. 20 ವರ್ಷಗಳ ಹಿಂದೆ ಮಾರಾಟ ಮಾಡಿದ್ದ ಜಮೀನಿಗೆ ಈಗ ತೊಂದರೆ ಅನುಭವಿಸಬೇಕಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

 

Leave a Reply

Your email address will not be published. Required fields are marked *

error: Content is protected !!