ಉದಯವಾಹಿನಿ, ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಕ್ತಿಪ್ರದರ್ಶನಕ್ಕಾಗಿ ಹಾಗೂ ವಿರೋಧಪಕ್ಷಗಳ ಅಪಪ್ರಚಾರದ ವಿರುದ್ಧ ನಗರದಲ್ಲಿ ಆಯೋಜಿಸಲಾಗಿದ್ದ ಜನಕಲ್ಯಾಣ ಸಮಾವೇಶಕ್ಕೆ ಜನಸಾಗರವೇ ಹರಿದು ಬಂದಿತ್ತು.
ಸ್ವಾಭಿಮಾನಿ ಸಂಘಟನೆಗಳ ಒಕ್ಕೂಟ ಹಾಗೂ ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಲಾಗಿದ್ದ ಈ ಸಮಾವೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಕೆ.ಎನ್.ರಾಜಣ್ಣ, ಚೆಲುವರಾಯಸ್ವಾಮಿ, ಡಾ.ಜಿ.ಪರಮೇಶ್ವರ್, ಪ್ರಿಯಾಂಕ್ ಖರ್ಗೆ, ವೆಂಕಟೇಶ್, ಎಚ್.ಸಿ. ಮಹದೇವಪ್ಪ, ಶಿವರಾಜ್ ತಂಗಡಗಿ, ಕೆ.ಎಚ್. ಮುನಿಯಪ್ಪ, ಲಕ್ಷ್ಮೀಹೆಬ್ಬಾಳ್ಕರ್, ಭೈರತಿ ಸುರೇಶ್, ಎಚ್.ಕೆ.ಪಾಟೀಲ್, ಶರಣ ಪ್ರಕಾಶ್ ಪಾಟೀಲ್, ಡಿ.ಸುಧಾಕರ್, ರಹೀಂಖಾನ್, ಜಮೀರ್ ಅಹಮದ್ ಖಾನ್, ಹಾಸನ ಸಂಸದ ಶ್ರೇಯಸ್ ಪಟೇಲ್, ಶಾಸಕರಾದ ಕೆ.ಎಂ.ಶಿವಲಿಂಗೇಗೌಡ ಸೇರಿದಂತೆ ಸಂಪುಟದ ಹಲವು ಸಚಿವರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!