ಉದಯವಾಹಿನಿ, ಆಲೂರು: ಪಟ್ಟಣದ ಸಮೀಪದ ಬಿರಂಜಿ ಹೊಳೆಯ ಪಕ್ಕದ ಜಾಗದ ವಿವಾದವು ಒಕ್ಕಲಿಗ ಮತ್ತು ಪರಿಶಿಷ್ಟ ಜಾತಿಯ ಮುಖಂಡರ ನಡುವೆ ಜಟಾಪಟಿಗೆ ಕಾರಣವಾಯಿತು. ವಿವಾದಿತ ಜಾಗದಲ್ಲಿ ದಲಿತ ಮಹಿಳೆಯ ಶವ ಸಂಸ್ಕಾರಕ್ಕೆ ಮುಂದಾದಾಗ ಒಕ್ಕಲಿಗ ಸಮುದಾಯ ಮಹಿಳೆಯೊಬ್ಬರು ಗುಂಡಿಗೆ ಇಳಿದು ಪ್ರತಿರೋಧ ವ್ಯಕ್ತಪಡಿಸಿದರು. – ಹಾಸನ ಸರ್ವೇ ನಂಬ‌ರ್ 108ರಲ್ಲಿ 2 ಎಕರೆ 32 ಗುಂಟೆ ಜಮೀನು ಪರಿಶಿಷ್ಟ ಜಾತಿಯ ಸ್ಮಶಾನ ಎಂದು ಪಹಣಿಯಲ್ಲಿದೆ. ಇದೇ ಜಾಗವನ್ನು ಗ್ರಾಮ ಪಂಚಾಯಿತಿಯಲ್ಲಿ ಒಕ್ಕಲಿಗ ಸಮುದಾಯ ಭವನ ಎಂದು 2013ರಲ್ಲಿ ನಿರ್ಣಯ ದಾಖಲಿಸಲಾಗಿದೆ. ಇದು ಎರಡು ಸಮುದಾಯಗಳ ನಡುವೆ ಜಟಾಪಟಿಗೆ ಕಾರಣವಾಗಿದೆ.

Leave a Reply

Your email address will not be published. Required fields are marked *

error: Content is protected !!