ಉದಯವಾಹಿನಿ, ಬಳ್ಳಾರಿ: ವಿಭಾಗದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಜಿಲ್ಲೆಯ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿ ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ಸಲ್ಲಿಸಿದ ಅರ್ಜಿಗಳನ್ನು ವಿಲೇ ಮಾಡದಿರುವ ಕುರಿತು ಕುಂದುಕೊರತೆಗಳ ಅಹವಾಲುಗಳ ಸ್ವೀಕಾರ/ಜನ ಸಂಪರ್ಕ ಸಭೆ ಏರ್ಪಡಿಸಲಾಗಿದೆ ಎಂದು ಬಳ್ಳಾರಿ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿದ್ಧರಾಜು.ಸಿ ಅವರು ತಿಳಿಸಿದ್ದಾರೆ. ಪೊಲೀಸ್ ಅಧೀಕ್ಷಕರಾದ ಸಿದ್ದರಾಜು.ಸಿ ಮಾರ್ಗದರ್ಶನದಲ್ಲಿ ಡಿಎಸ್ಪಿ ಆರ್.ವಸಂತ್ಕುಮಾರ್ ಮತ್ತು ಪೊಲೀಸ್ ನಿರೀಕ್ಷಕರಾದ ಸಂಗಮೇಶ್, ಮಹಮ್ಮದ್ ರಫಿ ನೇತೃತ್ವದಲ್ಲಿ ಬಳ್ಳಾರಿ ಮತ್ತು ಕಂಪ್ಲಿ ತಾಲ್ಲೂಕು ಕೇಂದ್ರಗಳಲ್ಲಿ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ನಡೆಯಲಿದೆ.
