ಉದಯವಾಹಿನಿ, ಬೆಂಗಳೂರು: ಉಚಿತ ಗ್ಯಾರೆಂಟಿ ಯೋಜನೆಗಳ ಜಾರಿಗೊಳಿಸುವ ವಿಚಾರದಲ್ಲಿ ಮಾತಿಗೆ ತಪ್ಪಿರುವ ಕಾಂಗ್ರೆಸ್ ನ ನಿಜ ಬಣ್ಣ ಬಯಲಾಗಿದ್ದು, ಗ್ಯಾರೆಂಟಿ ಯೋಜನೆ ಜಾರಿ ಮಾಡಲು ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ನೂಕುವ ಕೆಲಸ ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಇಂದು ಬೆಂಗಳೂರಿನ ಸರ್ಕಾರಿ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಕಾಂಗ್ರೆಸ್ ಚುನಾವಣೆ ಪೂರ್ವದಲ್ಲಿ ಜನರಿಗೆ ಬಹಳಷ್ಟು ಭರವಸೆ ತೋರಿಸಿತ್ತು. ಆದರೆ, ಜನರ ನಿರೀಕ್ಷೆಗಳನ್ನು ದೊಡ್ಡ ಮಟ್ಟದಲ್ಲಿರಿಸಿಕೊಂಡು ಚುನಾವಣೆ ಗೆದ್ದ ಕಾಂಗ್ರೆಸ್ ಪಕ್ಷ, ಚುನಾವಣೆ ಪೂರ್ವ ಮಾತಿಗೂ ಚುನಾವಣೆ ನಂತರದ ಮಾತಿಗೂ ಬಹಳ ವ್ಯತ್ಯಾಸ ಇದೆ. ಎಲ್ಲರಿಗೂ 200 ಯುನಿಟ್ ವಿದ್ಯುತ್ ಫ್ರೀ ಅಂತ ಹೇಳಿದ್ದಾರೆ. ಗ್ಯಾರೆಂಟಿ ಕಾರ್ಡ್ ನಲ್ಲಿಯೂ ಅದೇ ರೀತಿ ಹೇಳಿದ್ದಾರೆ. ಒಂದು ಮನೆಯಲ್ಲಿ 70 ಯೂನಿಟ್ ಅಥವಾ 80 ಯೂನಿಟ್ ಬಳಕೆ ಮಾಡಬಹುದು. 200 ಯೂನಿಟ್ ಬಳಕೆ ಮಾಡಿದರೆ ಉಚಿತ ಕೊಡಬೇಕು. ಆದರೆ, ಇವತ್ತಿನ ಮುಖ್ಯಮಂತ್ರಿಗಳ ಮಾತಿನಲ್ಲಿ ವ್ಯತ್ಯಾಸ ಇದೆ ಎಂದರು.
