ಉದಯವಾಹಿನಿ,  ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಕಾರ್ತಿಕ ಶುದ್ಧ ಷಷ್ಠಿಯ ದಿನವಾದ ಶನಿವಾರ ಮುಂಜಾನೆ ಬ್ರಹ್ಮರಥದಲ್ಲಿ ಸಂಭ್ರಮದ ಚಂಪಾಷಷ್ಠಿ ಮಹಾರಥೋತ್ಸವ ನಡೆಯಿತು. ಬೆಳಿಗ್ಗೆ 6.57ರ ವೃಶ್ಚಿಕ ಲಗ್ನ ಸುಮುಹೂರ್ತದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವರ ಬ್ರಹ್ಮರಥಾರೋಹಣ ನಡೆಯಿತು. ದೇವಳದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯರು ಉತ್ಸವದ ವಿವಿಧ ವೈದಿಕ ವಿಧಿವಿಧಾನ ನೆರವೇರಿಸಿದರು. ಅಪಾರ ಭಕ್ತರ ಜಯಘೋಷದ ನಡುವೆ ಭಕ್ತರು ದೇವರ ಮಹಾರಥವನ್ನು ಎಳೆದರು. ವರ್ಷದಲ್ಲಿ ಒಂದು ಬಾರಿ ಮಾತ್ರ ಸೇವೆ ನೆರವೇರಿಸಲು ಅವಕಾಶವಿರುವ ಬ್ರಹ್ಮರಥೋತ್ಸವ ಸೇವೆಯನ್ನು 150 ಭಕ್ತರು ಸಲ್ಲಿಸಿದರು.

ಬ್ರಹ್ಮರಥೋತ್ಸವ ಸೇವಾಕರ್ತರಿ ರಥ ಎಳೆಯಲು ವಿಶೇಷ ಪಾಸ್ ನೀಡಲಾಗಿತ್ತು. ದೇವಳದ ಹೊರಾಂಗಣದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಮತ್ತು ಉಮಾಮಹೇಶ್ವರ ದೇವರ ಪಾಲಕಿ ಉತ್ಸವ ನೆರವೇರಿತು. ಬಳಿಕ ರಾಜಬೀದಿಯಲ್ಲಿ ನಾಗಸ್ವರ, ಪಂಚವಾದ್ಯ, ಬ್ಯಾಂಡ್, ಜಾಗಟೆ, ಶಂಖ ವಾದ್ಯ ಮತ್ತು ಚೆಂಡ ವಾದನಗಳ ಹಿಮ್ಮೇಳದಲ್ಲಿ ಸಾಲಾಂಕೃತ ಆನೆ, ಬಿರುದಾವಳಿ, ಭಕ್ತಜನರ ಜಯಘೋಷದ ನಡುವೆ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥಾರೋಹಣ ನೆರವೇರಿತು. ಪಂಚಮಿ ರಥದಲ್ಲಿ ಉಮಾಮಹೇಶ್ವರ ದೇವರನ್ನು ಪ್ರತಿಷ್ಠಾಪಿಸಲಾಯಿತು. ಬಳಿಕ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಮಹಾ ಮಂಗಳಾರತಿ ನೆರವೇರಿತು.

Leave a Reply

Your email address will not be published. Required fields are marked *

error: Content is protected !!