ಉದಯವಾಹಿನಿ, ಗುಬ್ಬಿ : ಕುಣಿಗಲ್ ಭಾಗಕ್ಕೆ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ (ಪೈಪ್‌ಲೈನ್ ಮೂಲಕ ನೀರು ಹರಿಸುವುದು) ಮೂಲಕ ಹೇಮಾವತಿ ನೀರು ಹರಿಸುವ ಕಾಮಗಾರಿ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಬಿಜೆಪಿ, ಜೆಡಿಎಸ್ (ಎನ್‌ಡಿಎ) ನೇತೃತ್ವದಲ್ಲಿ ಶನಿವಾರ ಪಾದಯಾತ್ರೆ ಆರಂಭಿಸಲಾಯಿತು. ತಾಲ್ಲೂಕಿನ ಸಾಗರನಹಳ್ಳಿ ಬಳಿಯ ಹೇಮಾವತಿ ನಾಲೆಯ ಗೇಟ್ ಬಳಿ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಈ ಪಾದಯಾತ್ರೆ ಜಿಲ್ಲಾಧಿಕಾರಿ ಕಚೇರಿ ವರೆಗೆ ಸಾಗಲಿದೆ. ‘ನಮ್ಮ ನೀರು- ನಮ್ಮ ಹಕ್ಕು’ ಹೆಸರಿನಲ್ಲಿ ಹೋರಾಟ ಆರಂಭಿಸಿದ್ದು, ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಯನ್ನು ತಕ್ಷಣ ಸ್ಥಗಿತಗೊಳಿಸುವಂತೆ ಹೋರಾಟಗಾರರು ಒತ್ತಾಯಿಸಿದರು.
ಶಾಸಕರಾದ ಬಿ.ಸುರೇಶ್‌ಗೌಡ, ಜಿ.ಬಿ.ಜ್ಯೋತಿಗಣೇಶ್, ಎಂ.ಟಿ.ಕೃಷ್ಣಪ್ಪ. ಸಿ.ಬಿ.ಸುರೇಶ್‌ಬಾಬು, ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ, ಮಾಜಿ ಸಚಿವ ಸೊಗಡು ಶಿವಣ್ಣ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ.ಆಂಜನಪ್ಪ, ಬಿಜೆಪಿ ಜಿಲ್ಲಾ ಘಟಕದ ಎಚ್.ಎಸ್.ರವಿಶಂಕರ್, ಮುಖಂಡರಾದ ಮಸಾಲೆ ಜಯರಾಮ್, ಕೆ.ಟಿ.ಶಾಂತಕುಮಾರ್, ಎಸ್.ಡಿ.ದಿಲೀಪ್ ಕುಮಾರ್, ಗುಬ್ಬಿ ಬಿ.ಎಸ್.ನಾಗರಾಜ್, ಎಚ್.ನಿಂಗಪ್ಪ, ಕಾರದ ಮಠದ ಕಾರದ ವೀರಬಸವ ಸ್ವಾಮೀಜಿ, ಗೊಲ್ಲಹಳ್ಳಿ ಮಠದ ವಿಭವ ವಿದ್ಯಾಶಂಕರ ಸ್ವಾಮೀಜಿ ಮೊದಲಾದವರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.
