ಉದಯವಾಹಿನಿ, ತುಮಕೂರು: ಕುಣಿಗಲ್ ಭಾಗಕ್ಕೆ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ (ಪೈಪ್‌ಲೈನ್ ಮೂಲಕ ನೀರು ಹರಿಸುವುದು) ಮೂಲಕ ನೀರು ಹರಿಸುವ ಕಾಮಗಾರಿ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಬಿಜೆಪಿ, ಜೆಡಿಎಸ್ (ಎನ್‌ಡಿಎ) ಮುಖಂಡರು ಒಟ್ಟಾಗಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದರು.
ಗುಬ್ಬಿ ತಾಲ್ಲೂಕಿನ ಸಾಗರನಹಳ್ಳಿ ಗೇಟ್‌ನಿಂದ ನಗರದ ವರೆಗೆ ಶನಿವಾರ, ಭಾನುವಾರ ಪಾದಯಾತ್ರೆ ಕೈಗೊಂಡಿದ್ದರು. ಹೋರಾಟದ ಮುಂದುವರಿದ ಭಾಗವಾಗಿ ಧರಣಿ ಕೈಗೊಂಡಿದ್ದಾರೆ. ಕೂಡಲೇ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಸ್ಥಗಿತಗೊಳಿಸಬೇಕು. ಹೇಮಾವತಿ ನೀರಿನ ವಿಚಾರದಲ್ಲಿ ಜಿಲ್ಲೆಯ ಜನರಿಗೆ ಅನ್ಯಾಯ ಮಾಡುವುದನ್ನು ಸರ್ಕಾರ ನಿಲ್ಲಿಸಬೇಕು ಎಂದು ಆಗ್ರಹಿಸಿದರು.
