ಉದಯವಾಹಿನಿ, ನವದೆಹಲಿ: ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ರೈಲು ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಮಾತನಾಡಿದ್ದಾರೆ. ಇದೇ ವೇಳೆ ಈ ಅಪಘಾತದಲ್ಲಿ ಸಾವನ್ನಪ್ಪಿದಂತವರ ಆತ್ಮಕ್ಕೆ ಶಾಂತಿ ಸಿಗಲಿ ಎಂಬುದಾಗಿ ಸಂತಾಪ ಸೂಚಿಸಿದ್ದಾರೆ.ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು, ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಿಂದ ದುಃಖಿತನಾಗಿದ್ದೇನೆ. ಈ ದುಃಖದ ಸಮಯದಲ್ಲಿ, ದುಃಖಿತ ಕುಟುಂಬಗಳೊಂದಿಗೆ ನಾನು ಇದ್ದೇನೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹೇಳಿದ್ದಾರೆ.ಈ ಘಟನೆ ಸಂಬಂಧ ರೈಲ್ವೆ ಸಚಿವರೊಂದಿಗೆ ಮಾತನಾಡಿದ್ದೇನೆ. ಅಶ್ವಿನಿ ವೈಷ್ಣವ್ ಅವರಿಂದ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದೇನೆ. ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಮತ್ತು ಪೀಡಿತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲಾಗುತ್ತಿದೆ ಎಂಬುದಾಗಿ ತಿಳಿಸಿದ್ದಾರೆ.
