ಉದಯವಾಹಿನಿ, ಬೆಂಗಳೂರು : ಅಪ್ರಾಪ್ತ ಬಾಲಕನ ಜೊತೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದ ಮದರಸಾವೊಂದರ ಇಬ್ಬರು ಶಿಕ್ಷಕರ ವಿರುದ್ಧ ಪೊಲೀಸರಿಗೆ ದೂರು ನೀಡದ ಹಿನ್ನೆಲೆಯಲ್ಲಿ ಮದರಸಾ ಸ್ಥಾಪಕ ಟ್ರಸ್ಟಿ ವಿರುದ್ಧದದ ಪ್ರಕರಣ ರದ್ದುಗೊಳಸಲು ಹೈಕೋರ್ಟ್ ನಿರಾಕರಿಸಿದೆ. ಮಾಣಿಕ್ ಮಸ್ತಾನ್ ಮದರಸಾದ ಟ್ರಸ್ಟಿ ಮೊಹಮ್ಮದ್ ಅಮೀರ್ ರಾಜಾ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೋ) ಸೆಕ್ಷನ್ ೨೧(ಪ್ರಕರಣ ದಾಖಲಿಸಿದ್ದಕ್ಕೆ ಶಿಕ್ಷೆ) ಪ್ರಕಾರ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ನಡೆಸಿದ ಕುರಿತ ಮಾಹಿತಿ ಗಮನಕ್ಕೆ ಬಂದ ತಕ್ಷಣ ದೂರು ದಾಖಲಿಸಬೇಕು ಎಂದು ತಿಳಿಸಲಾಗಿದೆ. ಆದರೆ, ಅರ್ಜಿದಾರರು ಮಾಹಿತಿಯಿದ್ದರೂ ದೂರು ದಾಖಲಿಸಲು ವಿಫಲರಾಗಿದ್ದಾರೆ ಎಂದು ಪೀಠ ತಿಳಿಸಿದೆ.
