ಉದಯವಾಹಿನಿ, ಕೋಲಾರ : ಆರೋಗ್ಯವೇ ಭಾಗ್ಯ ಎನ್ನುವ ತತ್ವದಡಿ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯಕ್ಕಾಗಿ ಚಿಕಿತ್ಸೆ ನೀಡುವುದು ಅಗತ್ಯವಾಗಿದೆ ಗ್ರಾಮೀಣ ಭಾಗದಲ್ಲಿ ಆರೋಗ್ಯ ಶಿಬಿರಗಳನ್ನು ಆಯೋಜನೆ ಮೂಲಕ ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುತ್ತಿದೆ ಎಂದು ಹರಟಿ ಗ್ರಾ.ಪಂ ಅಧ್ಯಕ್ಷ ಆರ್.ವೆಂಕಟೇಶಪ್ಪ ಹೇಳಿದರು.
ತಾಲ್ಲೂಕಿನ ಶಿಳ್ಳೆಂಗೆರೆ ಅಂಬೇಡ್ಕರ್ ಪ್ರಜ್ಙಾವಂತ ಯುವಕರ ಸಂಘ, ಟಮಕಾ ಆರ್.ಎಲ್. ಜಾಲಪ್ಪ ಆಸ್ಪತ್ರೆ ಮತ್ತು ಸಂಶೋದನಾ ಕೇಂದ್ರ ಸಮುದಾಯ ವೈದ್ಯಶಾಸ್ತ್ರ ವಿಭಾಗದಿಂದ ವಿ.ಮಧು ಜ್ಞಾಪಕಾರ್ಥವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಗ್ರಾಮದ ಯುವಕ ವಿ.ಮಧು ಇತ್ತೀಚೆಗೆ ಅಕಸ್ಮಿಕ ವಿದ್ಯುತ್ ಅವಘಡದಲ್ಲಿ ಮೃತರಾಗಿದ್ದು ಅವರ ಜ್ಞಾಪಕಾರ್ಥವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ಹಮ್ಮಿಕೊಂಡಿದ್ದು ಇಂತಹ ಕಾರ್ಯಕ್ರಮಗಳು ಹಳ್ಳಿಗಳಲ್ಲಿ ಹೆಚ್ಚೆಚ್ಚು ನಡೆಯಬೇಕು ಇದರಿಂದ ಗ್ರಾಮಾಂತರ ಪ್ರದೇಶದ ಜನಸಾಮಾನ್ಯರಿಗೆ ಆರೋಗ್ಯದ ಮೇಲೆ ಅರಿವು ಮೂಡಿಸಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
