ಉದಯವಾಹಿನಿ,ಬೆಂಗಳೂರು: ನಿನ್ನೆ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಐದು ಗ್ಯಾರಂಟಿ ಯೋಜನೆಗಳಿಗೆ ಸಿಎಂ ಸಿದ್ಧರಾಮಯ್ಯ ಅನುಮೋದನೆ ನೀಡಿದ್ದರು. ಸಿಎಂ ಸಿದ್ಧರಾಮಯ್ಯ ರಾಜ್ಯದ ಪಡಿತರ ಚೀಟಿದಾರರಿಗೆ 10 ಕೆಜಿ ಅಕ್ಕಿಯನ್ನು ಹೆಚ್ಚಿಸುವ ಘೋಷಣೆಯನ್ನು ಮಾಡಿದ್ದರು.ಅದರಂತೆ ರಾಜ್ಯದಲ್ಲಿ ಸಾರ್ವಜನಿಕ ವಿತರಣಾ ಪದ್ದತಿಯಡಿ ವಿತರಿಸಲಾಗಿರುವ ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಯನ್ನು ಹೊದಿರುವ ಕುಟುಂಬಗಳಿಗೆ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯನ್ನು 10 ಕೆಜಿಗೆ ಹೆಚ್ಚಿಸಿ ಅಧಿಕೃತವಾಗಿ ಆದೇಶ ಹೊರಡಿಸಿದ್ದಾರೆ.ಈ ಕುರಿತಂತೆ ಇಂದು ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗಿರುವ ಅತ್ಯೋದಯ ಅನ್ನಯೋಜನೆ (AAY), ಆದ್ಯತಾ ಕುಟುಂಬ ಪಡಿತರ ಚೀಟಿಗಳು ಹಾಗೂ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ವಿತರಿಸಲಾಗಿರುವ ಆದ್ಯತಾ ಪಡಿತರ ಚೀಟಿಗಳ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 10 ಕೆಜಿ ಆಹಾರ ಧಾನ್ಯವನ್ನು ದಿನಾಂಕ 01-07-2023ರಿಂದ ಅನ್ವಯವಾಗುವಂತೆ ಉಚಿತವಾಗಿ ವಿತರಿಸಲು ಆದೇಶಿಸಿದ್ದಾರೆ.ಈ ಹಿನ್ನಲೆಯಲ್ಲಿ ದಿನಾಂಕ 01-07-2023ರ ಜುಲೈ ತಿಂಗಳಿನಿಂದ ಬಿಪಿಎಲ್, ಎಪಿಎಲ್ ಪಡಿತರ ಕಾರ್ಡ್ ದಾರರಿಗೆ ಇನ್ಮುಂದೆ 10 ಕೆಜಿ ಅಕ್ಕಿಯನ್ನು ಪ್ರತಿ ಸದಸ್ಯರಿಗೆ ಸರ್ಕಾರದಿಂದ ಉಚಿತವಾಗಿ ವಿತರಣೆ ಮಾಡಲಾಗುವುದು.
