ಉದಯವಾಹಿನಿ, ನವದೆಹಲಿ: ಉಗ್ರ ಚಟುವಟಿಕೆ ಹರಡಲು ಯತ್ನಿಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಇಂದು ನಾಲ್ಕು ರಾಜ್ಯಗಳಲ್ಲಿ ತೀವ್ರ ಶೋಧ ಕಾರ್ಯ ನಡೆಸಿದೆ.
ಯುವಕರಿಗೆ ಭಯೋತ್ಪಾದನೆಯ ಅಮಲು ಹೇರಿಸುವುದು ಮತ್ತು ದೇಶದಲ್ಲಿ ಭಯೋತ್ಪಾದನೆಯನ್ನು ಹರಡಲು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮದ್ ಸಂಚು ರೂಪಿಸಿದೆ ಎಂಬ ಶಂಕೆ ಮೇರೆಗೆ ಈ ಕಾರ್ಯಚರಣೆ ನಡೆಸಲಾಗಿದೆ.
ತನಿಖೆಯ ಭಾಗವಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಇಂದು ಏಕಕಾಲಕ್ಕೆ ಬಹು ರಾಜ್ಯಗಳ ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಪ್ರದೇಶ ಮತ್ತು ಜಮು ಮತ್ತು ಕಾಶೀರದ ಕೇಂದ್ರಾಡಳಿತ ಪ್ರದೇಶ ಸೇರಿದಂತೆ ನಾಲ್ಕು ರಾಜ್ಯಗಳ 19 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!