ಉದಯವಾಹಿನಿ, ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾಗೌಡ ಸೇರಿ ಏಳು ಮಂದಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಸುದೀರ್ಘ ವಾದ-ಪ್ರತಿವಾದ ಆಲಿಸಿ ಇದೇ 9ರಂದು ಕಾಯ್ದಿರಿಸಿದ ತೀರ್ಪನ್ನು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಇಂದು ಮಧ್ಯಾಹ್ನ ಪ್ರಕಟಿಸಿತು. ‘ಎಲ್ಲರ ಜಾಮೀನು ಅರ್ಜಿಗಳನ್ನು ಪುರಸ್ಕರಿಸಲಾಗಿದೆ’ ಎಂದು ನ್ಯಾಯಪೀಠ ಹೇಳಿದೆ. ವಿಸ್ಕೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ. ಪ್ರಕರಣದ ಆರೋಪಿಗಳಾದ ಆರ್. ನಾಗರಾಜು, ಎಂ. ಲಕ್ಷ್ಮಣ್, ಅನು ಕುಮಾರ್ ಅಲಿಯಾಸ್ ಅನು, ಜಗದೀಶ್ ಅಲಿಯಾಸ್ ಜಗ್ಗ, ಪ್ರದೋಷ್ ರಾವ್ ಅವರಿಗೆ ಕೋರ್ಟ್ ಜಾಮೀನು ನೀಡಿದೆ.
