ಉದಯವಾಹಿನಿ, ಬೆಳಗಾವಿ: ರಾಜಧಾನಿ ಬೆಂಗಳೂರಿನಲ್ಲಿ ಮಳೆಗಾಲದಲ್ಲಿ ಮನೆಗಳಿಗೆ ನೀರು ನುಗ್ಗುವುದನ್ನುತಪ್ಪಿಸಲು ರಾಜಕಾಲುಗಳ ಸಮಗ್ರ ಅಭಿವೃದ್ಧಿಗೆ ಮೂರು ಸಾವಿರ ಕೋಟಿ ರೂಪಾಯಿಗಳ ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶದಲ್ಲಿ ಮಳೆ ಹಾನಿಯ ಕುರಿತು ಸ್ವಯಂ ಪ್ರೇರಿತವಾಗಿ ಹೇಳಿಕೆ ನೀಡಿದ ಅವರು, ಬೆಂಗಳೂರಿನಲ್ಲಿ ರಾಜಕಾಲುವೆಗಳ ದುರಸ್ತಿ, ರಾಜ್ಯದ ಹಲವೆಡೆ ಭೂ ಕುಸಿತ ಸೇರಿದಂತೆ ಇತರೆ ಅವಗಡಗಳಿಗೆ ಶಾಶ್ವತ ಪರಿಹಾರಕ ಕಂಡುಕೊಳ್ಳಲು ಒಟ್ಟು ಐದು ಸಾವಿರ ಕೋಟಿ ರೂಪಾಯಿಗಳ ಸಮಗ್ರಯೋಜನೆ ತಯಾರಾಗಿದೆ ಎಂದು ಹೇಳಿದ್ದಾರೆ.
ಮಳೆಯಿಂದ ಬೆಂಗಳೂರಿನಲ್ಲೂ ಸಾಕಷ್ಟು ಹಾನಿಯಾಗುತ್ತಿದೆ. ನೀರು ಸರಾಗವಾಗಿ ಹರಿಯದೆ ವಸತಿ ಪ್ರದೇಶಗಳಿಗೆ ನುಗ್ಗುತ್ತಿದೆ. ಹೀಗಾಗಿ ನೀರು ಹರಿಯುವ ರಾಜಕಾಲುವೆಗಳನ್ನು ಪರಿಪಕ್ವವಾಗಿ ಅಭಿವೃದ್ಧಿ ಪಡಿಸಲು ನಿರ್ಧರಿಸಲಾಗಿದೆ. ಈ ನಿಟ್ಟಿನಲಿ ಕಂದಾಯ ಇಲಾಖೆಗೂ ಕೆಲ ಸೂಚನೆಗಳನ್ನು ನೀಡಿದ್ದಾರೆ.
