ಉದಯವಾಹಿನಿ, ಬಳ್ಳಾರಿ: ಜಿಲ್ಲಾ ಆಸ್ಪತ್ರೆಗೆ ದಾಖಲಾಗಿ ಬಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ಜಿಲ್ಲೆಯ ನಾಲ್ಕು ಬಾಣಂತಿಯರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಿಲಾಗಿದೆ.
ಮೃತಪಟ್ಟ ಬಾಣಂತಿಯರ ನಾಲ್ವರಲ್ಲಿ ಒಬ್ಬರಾದ ತಾಲೂಕಿನ ಬಾಣಾಪುರ ಗ್ರಾಮದ ಹೂಗಾರ್ ನಂದಿನಿ ಅವರ ಕುಟುಂಬ ಸದಸ್ಯರಿಗೆ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರು ವಿಧಾನಸಭಾ ಅಧಿವೇಶನದಲ್ಲಿರುವ ಹಿನ್ನೆಲೆಯಲ್ಲಿ ಅವರ ಸೂಚನೆ ಮೇರೆಗೆ ಅಧಿಕಾರಿಗಳು 5 ಲಕ್ಷ ರೂಪಾಯಿ ಚೆಕ್ಕನ್ನು ವಿತರಣೆ ಮಾಡಿದ್ದಾರೆ.
ಸರ್ಕಾರದಿಂದ ಪರಿಹಾರ ಘೋಷಿಸಿದ ಮುಖ್ಯಮಂತ್ರಿಗ ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳು ತಿಳಿಸಿದ್ದಾರೆ.
