ಉದಯವಾಹಿನಿ, ಬೆಂಗಳೂರು : ಮೊದಲ ಬಾರಿ ಆಯ್ಕೆಯಾದ ಶಾಸಕರಿಗೆ ಅಭಿವೃದ್ಧಿಗೆ ಅನುದಾನ ಸಿಗುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ಶಾಸಕ ಬಿ.ವೈ.ವಿಜಯೇಂದ್ರ ಆರೋಪಿಸಿದರು.ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಮಾತನಾಡಿದ ಅವರು, ಪಕ್ಷಾತೀತವಾಗಿ ಎಲ್ಲಾ ಶಾಸಕರು ತಮಗೆ ಅನುದಾನ ದೊರೆಯುತ್ತಿಲ್ಲ ಅಳಲು ಹೇಳಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿಯವರು ಈಗಲಾದರೂ ಎಚ್ಚೆತ್ತುಕೊಂಡು ಮೊದಲ ಬಾರಿಗೆ ಆಯ್ಕೆಯಾದ ಶಾಸಕರಿಗೆ ಹೆಚ್ಚಿನ ಹಣ ನೀಡಿ ಎಂದು ಮನವಿ ಮಾಡಿದರು.
ಉತ್ತರ ಕರ್ನಾಟಕ ಭಾಗದಲ್ಲಿ ನೀರಾವರಿ ಯೋಜನೆಗಳಿಗೆ ಶಾಶ್ವತ ಪರಿಹಾರ, ಕಬ್ಬು ಹಾಗೂ ತೊಗರಿ ಬೆಳೆಗಾರರ ಸಮಸ್ಯೆಗಳಿಗೆ ಪರಿಹಾರ. ಯುವಕರ ನಿರುದ್ಯೋಗ ಸಮಸ್ಯೆ. ಶಿಕ್ಷಣ, ಆರೋಗ್ಯ, ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸಲು ರಾಜ್ಯ ಸರ್ಕಾರ ಹೆಚ್ಚಿನ ಗಮನ ಹರಿಸಬೇಕು. ಸೆಪ್ಟಂಬರ್ 17ರಂದು ಕಲರ್ಗ್ಬಿಯಲ್ಲಿ ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆ ನಡೆಸಲಾಗಿದೆ. 11 ಸಾವಿರ ಕೋಟಿ ರೂಪಾಯಿಗಳ ಕ್ರೀಯಾ ಯೋಜನೆ ನೀಡುವುದಾಗಿ ಘೋಷಣೆ ಮಾಡಲಾಗಿದೆ. ಆದರೆ ಈವರೆಗೂ ಹಣ ಬಿಡುಗಡೆಯಾಗಿಲ್ಲ, ಯಾವ ಘೋಷಣೆಗಳು ಅನುಷ್ಠಾನಕ್ಕೆ ಬಂದಿಲ್ಲ ಎಂದರು.
ಕೃಷ್ಣ ಮೆಲ್ದಂಡೆ ಯೋಜನೆಗಾಗಿ ರೈತರು ನಿರಂತರ ಹೋರಾಟ ನಡೆಸುತ್ತಿದ್ದಾರೆ. ಪ್ರತಿ ವರ್ಷ 40 ಸಾವಿರ ಕೋಟಿ ರೂಪಾಯಿ ಕೊಟ್ಟು ಯೋಜನೆ ಪೂರ್ಣಗೊಳಿಸುವುದಾಗಿ ಕಾಂಗ್ರೆಸ್ ನಾಯಕರು ಚುನಾವಣೆ ವೇಳೆ ಭರವಸೆ ನೀಡಿದ್ದರು, ಅದು ಈಡೇರಿಲ್ಲ. ಈವರೆಗೂ ಆಲಮಟ್ಟಿ ಮುಳುಗಡೆ ಪ್ರದೇಶಕ್ಕೆ ಸೂಕ್ತ ಪುನರ್ವಸತಿ ಯೋಜನೆ ಕೈಗೊಂಡಿಲ್ಲ ಎಂದು ಆರೋಪಿಸಿದರು.

Leave a Reply

Your email address will not be published. Required fields are marked *

error: Content is protected !!