ಉದಯವಾಹಿನಿ, ಶಿವಮೊಗ್ಗ: ಏಕಾಏಕಿ ಗೃಹ ಬಳಕೆಯ ವಿದ್ಯುತ್ ದರವನ್ನು ಹೆಚ್ಚಿಸಿದ್ದನ್ನು ವಿರೋಧಿಸಿ, ನಾಳೆ ರಾಜ್ಯ ಕಾಂಗ್ರೇಸ್ ಸರ್ಕಾರದ ವಿರುದ್ಧ ನಗರದಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆಯನ್ನು ನಡೆಸಲಾಗುತ್ತಿದೆ.ಈ ಕುರಿತಂತೆ ಶಿವಮೊಗ್ಗ ಬಿಜೆಪಿ ಜಿಲ್ಲಾ ಸಂಚಾಲಕ ಕೆ.ವಿ ಅಣ್ಣಪ್ಪ ಮಾಹಿತಿ ನೀಡಿದ್ದು, ದಿ.05.06.2023 ರ ಸೋಮವಾರ ಬೆಳಿಗ್ಗೆ 11.15 ಕ್ಕೆ ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದ ಮುಂಭಾಗದಲ್ಲಿ ರಾಜ್ಯ ಕಾಂಗ್ರೇಸ್ ಸರ್ಕಾರ ಏಕಾಏಕಿ ಗೃಹ ಬಳಕೆಯ ವಿದ್ಯುತ್ ದರವನ್ನು ಏರಿಕೆ ಮಾಡಿರುವ ವಿರುದ್ಧ ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ಯನ್ನು ಹಮ್ಮಿಕೊಳ್ಳಲಾಗಿದೆ ಎಂದಿದ್ದಾರೆ.ಈ ಪ್ರತಿಭಟನೆಯಲ್ಲಿ ಬಿಜೆಪಿ ಶಿವಮೊಗ್ಗ ಜಿಲ್ಲಾಧ್ಯಕ್ಷರಾದ ಟಿ ಡಿ ಮೇಘರಾಜ್ ,ನಗರಧ್ಯಕ್ಷರಾದ ಜಗದೀಶ್ ಎನ್ ಕೆ, ಶಾಸಕರಾದ ಎಸ್ ಎನ್ ಚನ್ನಬಸಪ್ಪ (ಚೆನ್ನಿ), ವಿಧಾನಪರಿಷತ್ ಸದಸ್ಯರುಗಳು, ಮಹಾನಗರಪಾಲಿಕೆ ಆಡಳಿತ ಪಕ್ಷದ ನಾಯಕರಾದ ಎಸ್ ಜ್ಞಾನೇಶ್ವರ್, ಸುಡಾ ಮಾಜಿ ಅಧ್ಯಕ್ಷರಾದ ಎನ್ ಜಿ ನಾಗರಾಜ್, ಪಾಲಿಕೆಯ ಮಹಾಪೌರರಾದ ಎಸ್ ಶಿವಕುಮಾರ್, ಉಪ ಮಹಾಪೌರರಾದ ಲಕ್ಷ್ಮಿ ಶಂಕರ್ ನಾಯ್ಕ್ ಸೇರಿದಂತೆ ಮಹಾನಗರಪಾಲಿಕೆಯ ಎಲ್ಲಾ ಸದಸ್ಯರುಗಳು, ಪಕ್ಷದ ಹಿರಿಯ ಮುಖಂಡರುಗಳು ಹಾಗೂ ಎಲ್ಲಾ ಕಾರ್ಯಕರ್ತರುಗಳು ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.
