ಉದಯವಾಹಿನಿ, ಬೆಳಗಾವಿ: ಬೆಂಗಳೂರಿನ ಬಾಲಭವನಕ್ಕಿಂತ ಸುಂದರವಾಗಿ, ವಿಶಿಷ್ಟವಾಗಿ ಬೆಳಗಾವಿ ಬಾಲಭವನ ನಿರ್ಮಿಸಬೇಕೆನ್ನುವ ಗುರಿ ಇದ್ದು, 20 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಬಾಲಭವನ ನಿರ್ಮಾಣಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬೆಂಗಳೂರಿನ ಜವಾಹರ ಬಾಲಭವನ ಸೊಸೈಟಿ, ನಿರ್ಮಿತಿ ಕೇಂದ್ರ ಹಾಗೂ ಜಿಲ್ಲಾ ಬಾಲ ಭವನ ಸಮಿತಿ ಸಂಯುಕ್ತ ಆಶ್ರಯದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಜಿಲ್ಲಾ ಬಾಲ ಭವನಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಬೆಳಗಾವಿ ಎರಡನೇ ರಾಜಧಾನಿ ಮಟ್ಟಕ್ಕೆ ಬೆಳೆಯುತ್ತಿದೆ.

ಅದಕ್ಕೆ ತಕ್ಕಂತೆ ಇಲ್ಲಿ ಅಭಿವೃದ್ಧಿ ಕೆಲಸಗಳು ಕೂಡ ನಡೆಯಬೇಕು, ಮೂಲಭೂತ ಸೌಲಭ್ಯಗಳು ಕೂಡ ನಿರ್ಮಾಣವಾಗಬೇಕು. ನಮ ಇಲಾಖೆಯಿಂದ ಜಿಲ್ಲೆಗೆ ಅನೇಕ ಯೊಜನೆಗಳನ್ನು ತರಲಾಗುತ್ತಿದೆ ಎಂದು ಹೇಳಿದರು.  ಇಷ್ಟೊಂದು ದೊಡ್ಡ ಜಿಲ್ಲೆಗೆ ಈವರೆಗೂ ಒಂದು ಸುಸಜ್ಜಿತ ಬಾಲಭವನ ಇಲ್ಲ, ನಮ ಇಲಾಖೆಗೆ ಸುಸಜ್ಜಿತ ಕಟ್ಟಡ ಕೂಡ ಇಲ್ಲ. ಈ ಹಿನ್ನೆಲೆಯಲ್ಲಿ ಬಾಲಭವನಕ್ಕೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ. ನಗರದ ಮಧ್ಯದಲ್ಲಿಯೇ 4 ಎಕರೆ ಈ ವಿಶಾಲ ಜಾಗವನ್ನು ಗುರುತಿಸಿ ಬಾಲಭವನ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!