ಉದಯವಾಹಿನಿ, ಬೆಂಗಳೂರು: ಸಣ್ಣ ಕೈಗಾರಿಕೆ ಕ್ಷೇತ್ರ ಬೆಳೆದು ರಫ್ತು ಹೆಚ್ಚಾಗಿ ಆಮದು ಕಡಿಮೆಯಾಗಬೇಕು. ವಿಶ್ವಬ್ಯಾಂಕ್ ಮತ್ತು ಸರ್ಕಾರ ಜೊತೆಗೂಡಿ ಎಂಎಎoಇ ಗಳ ಕಾರ್ಯಕ್ಷಮತೆ ಹೆಚ್ಚಳ ಹಾಗೂ ವೇಗಗೊಳಿಸುವ ಪ್ಯೋಜನೆಯನ್ನು ಜಾರಿಗೆ ತರಲಾಗಿದೆ ವಿಟಿಪಿಸಿ ವ್ಯವಸ್ಥಾಕ ನಿರ್ದೇಶಕ ಬಿ.ಕೆ.ಶಿವಕುಮಾರ್ ಹೇಳಿದರು.
ಕಾಸಿಯಾ ಸಭಾಂಗಣದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನಾ ಕೇಂದ್ರ (ವಿ.ಟಿ.ಪಿ.ಸಿ) ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಸಹಯೋಗದಲ್ಲಿ ಎಂ.ಎಸ್.ಎ.ಇ.ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವ (ಆರ್‌ಎಎಂಪಿ) ಯೋಜನೆಯಡಿ ಲೀನ್, ಝಡ್.ಇ.ಡಿ. ಹಾಗೂ ರಫ್ತು ಕುರಿತು ಆಯೋಜಿಸಲಾಗಿದ್ದ ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಯನ್ನು ತಂತ್ರಜ್ಞಾನ, ಮಾರುಕಟ್ಟೆ ವ್ಯವಸ್ಥೆಗೆ ತಕ್ಕಂತೆ ಪರಿವರ್ತನೆ ಗೊಳಿಸಬಹುದಾಗಿದೆ. ರಫ್ತು ಹೆಚ್ಚಿಸಲು ಪೂರಕ ವಾತಾವರಣವಿದ್ದು ಇಂತಹ ಕಾರ್ಯಕ್ರಮಗಳನ್ನು ಸದುಪಯೋಗ ಪಡೆಸಿಕೊಂಡು ಹೆಚ್ಚು ಹೆಚ್ಚು ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳು ಮುಂದಾಗಬೇಕು ಎಂದು ಮನವಿ ಮಾಡಿದರು.
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಅಪರ ನಿರ್ದೇಶಕ ಮಾಣಿಕ್ ವಿ. ರಾಘೋಜಿ, ಅಪರ ಮಾತನಾಡಿ, ರ್‍ಯಾಂಪ್ ಯೋಜನೆಯಡಿಯಲ್ಲಿ ೪ ವರ್ಷಗಳ ಕಾರ್ಯಕ್ರಮಗಳನ್ನು ರೂಪಿಸಿದ್ದು ಅದರ ಪ್ರಾರಂಭವಾಗಿ ಈ ವರ್ಷ ರಾಜ್ಯಾದ್ಯಂತ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು ಅದರ ಪ್ರಯೋಜನ ಪಡೆಯುವಂತೆ ಮನವಿ ಮಾಡಿದರು.
