ಉದಯವಾಹಿನಿ, ಬೆಂಗಳೂರು: ನಗರ ಸಂಚಾರ ಪೊಲೀಸರಿಂದ ಶಬ್ದ ಮಾಲೀನ್ಯ ನಿಯಂತ್ರಣಕ್ಕಾಗಿ ವಿಶೇಷ ಕಾರ್ಯಾಚರಣೆಯನ್ನು ನಡೆಸಲಾಗಿದೆ. ಈ ಮೂಲಕ 20 ಪ್ರಕರಣವನ್ನು ದಾಖಲು ಮಾಡಲಾಗಿದೆ.ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ದಿನಾಂಕ 03-06-2023ರಂದು ಬೆಂಗಳೂರು ನಗರ ಕೇಂದ್ರ, ಪಶ್ಚಿಮ ಮತ್ತು ದಕ್ಷಿಣ ವಿಭಾಗಗಳಲ್ಲಿ ಶಬ್ದ ಮಾಲಿನ್ಯಕ್ಕೆ ಸಂಬಂಧಪಟ್ಟಂತೆ ವಿಶೇಷ ಕಾರ್ಯಾಚರಣೆ ಕೈಗೊಂಡು, ಶಬ್ದ ಮಾಲಿನ್ಯಕ್ಕೆ ಸಂಬಂಧಿಸಿದಂತೆ ಉಲ್ಲಂಘನೆ ಮಾಡಿದವರ ವಿರುದ್ಧ 20 ಪ್ರಕರಣಗಳನ್ನು ದಾಖಲು ಮಾಡಲಾಗಿದೆ ಎಂದು ತಿಳಿಸಿದೆ.
ಕೇಂದ್ರ ವಿಭಾಗದ ಅಶೋಕನಗರ ಪೊಲೀಸ್ ಠಾಣೆ ಸರಹದ್ದಿನ ಆಕ್ಟೇವ್ ಮತ್ತು 1522 ಪಬ್ ಗಳು, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಸರಹದ್ದಿನ ಲಿಟಲ್ ಪಬ್ ಮತ್ತು ಗಿಲ್ಲಿಸ್ ಇನ್ ಪಬ್ ಗಳ ವಿರುದ್ಧ 4 ಪ್ರಕರಣಗಳನ್ನು ದಾಖಲು ಮಾಡಲಾಗಿರುತ್ತದೆ ಎಂದಿದೆ.ಪಶ್ಚಿಮ ವಿಭಾಗದ ಮಾಗಡಿ ರಸ್ತೆ ಪೊಲೀಸ್ ಠಾಣೆ ಸರಹದ್ದಿನ ರೆಸ್ಟೋ ಬಾರ್ ಅಂಡ್ ರೆಸ್ಟೋರೆಂಟ್, ಕೆಪಿ ಅಗ್ರಹಾರ ಠಾಣೆಯ ದರ್ಶನ್ ಬಾರ್, ಬಸವೇಶ್ವರ ನಗರ ಪೊಲೀಸ್ ಠಾಣೆ ಸರಹದ್ದಿನ ಆಲ್ಟಿಟ್ಯೂಡ್ ಪಬ್ ಮತ್ತು ಗೋವಿಂದರಾಜನಗರ ಪೊಲೀಸ್ ಠಾಣೆ ಸರಹದ್ದಿನಲ್ಲಿರುವ ಕೈಗಾರಿಕೆ ಪ್ರದೇಶದಲ್ಲಿ 5 ಪ್ರಕರಣಗಳನ್ನು ಮತ್ತು ಬ್ಯಾಡರಹಳ್ಳಿ ಪೊಲೀಸ್ ಠಾಣೆ ಸರಹದ್ದಿನ ಇಂಡಸ್ಟ್ರೀಯಲ್ ಏರಿಯಾಗಳಲ್ಲಿ 2 ಪ್ರಕರಣ ಸೇರಿದಂತೆ ಒಟ್ಟು 10 ಶಬ್ದ ಮಾಲಿನ್ಯ ಪ್ರಕರಣಗಳನ್ನು ದಾಖಲು ಮಾಡಿರುವುದಾಗಿ ಹೇಳಿದೆ.

Leave a Reply

Your email address will not be published. Required fields are marked *

error: Content is protected !!