ಉದಯವಾಹಿನಿ, ಬೆಂಗಳೂರು : ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದ್ದು, ಎನ್.ಆ‌ರ್ ಪುರದಲ್ಲಿ ರೈತರೊಬ್ಬರು ಸಾವನ್ನಪ್ಪಿದ್ದಾರೆ.  ಕೆರೆಗದ್ದೆ ನಿವಾಸಿ ಉಮೇಶ್ ಎಂಬುವವರು ಕಾಡಾನೆ ದಾಳಿಗೆ ಬಲಿಯಾಗಿದ್ದರು. ಈ ಬೆನ್ನಲ್ಲೇ ಮತ್ತೊಂದು ಘಟನೆ ನಡೆದಿದೆ. ಮುತ್ತಿನಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಯಕ್ಕಡಬೈಲು ಗ್ರಾಮದ ಎಲಿಯಾಸ್ (60) ಎಂಬುವವರು ಮೃತಪಟ್ಟಿದ್ದು, ತಮ್ಮ ಮನೆಯ ಹಿಂಭಾಗದ ಕಾಡಿನಲ್ಲೇ ಆನೆ ತುಳಿತಕ್ಕೊಳಗಾಗಿ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!