ಉದಯವಾಹಿನಿ, ಮೈಸೂರು: ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 139ನೇ ಜಯಂತಿಯನ್ನು ಅರಸು ಮಂಡಳಿ ಸಂಘದಿಂದ ಭಾನುವಾರ ಸಂಭ್ರಮದಿಂದ ಆಚರಿಸಲಾಯಿತು.ನಗರದ ತ್ಯಾಗರಾಜ ರಸ್ತೆಯಲ್ಲಿರುವ ಸಂಘದ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿ, ‘ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ದೂರದೃಷ್ಟಿತ್ವದ ಕಾರ್ಯಗಳಿಂದ ಮೈಸೂರು ದೇಶದಲ್ಲಿಯೇ ಮಾದರಿ ಎನ್ನುವಂತೆ ಅಭಿವೃದ್ಧಿ ಹೊಂದಿದೆ. ಈ ಜನಪರ ಕಾರ್ಯಗಳಿಂದಾಗಿಯೇ ಜನರು ಸದಾ ಅವರನ್ನು ನೆನಪಿನಲ್ಲಿ ಇಟ್ಟುಕೊಂಡಿದ್ದಾರೆ’ ಎಂದರು.ಶಾಸಕ ಟಿ.ಎಸ್.ಶ್ರೀವತ್ಸ, ವಿಧಾನ ಪರಿಷತ್ ಸದಸ್ಯ ಡಾ.ಡಿ. ತಿಮ್ಮಯ್ಯ, ನಗರಪಾಲಿಕೆ ಸದಸ್ಯ ಬಿ.ವಿ. ಮಂಜುನಾಥ್, ಪೊಲೀಸ್ ಅಕಾಡೆಮಿ ಉಪನಿರ್ದೇಶಕ ಎನ್.ನಿರಂಜನ್ ರಾಜೇ ಅರಸ್, ಅರಸು ಮಂಡಳಿ ಸಂಘದ ಎಚ್.ಎಂ.ಟಿ. ಲಿಂಗರಾಜೇ ಅರಸ್, ಆಚರಣಾ ಸಮಿತಿ ಅಧ್ಯಕ್ಷ ಎಂ.ಎ.ಶ್ರೀಕಾಂತರಾಜೇ ಅರಸ್ ಇದ್ದರು.ನಂತರ ಅರಸು ಮಂಡಳಿ ಸಂಘದ ನೇತೃತ್ವದಲ್ಲಿ ಸಂಘದ ಕಚೇರಿಯಿಂದ ಕಲಾಮಂದಿರದವರೆಗೆ ಮೆರವಣಿಗೆ ನಡೆಯಿತು.

Leave a Reply

Your email address will not be published. Required fields are marked *

error: Content is protected !!