ಉದಯವಾಹಿನಿ, ಚಂಡೀಗಢ: ಭಾರತೀಯ ರಾಷ್ಟ್ರೀಯ ಲೋಕದಳ (ಐಎನ್‌ಎಲ್‌ಡಿ) ಮುಖ್ಯಸ್ಥ ಮತ್ತು ಹರಿಯಾಣದ ಮಾಜಿ ಮುಖ್ಯಮಂತ್ರಿ ಒಂ ಪ್ರಕಾಶ್ ಚೌತಾಲ(89) ಶುಕ್ರವಾರ (ಡಿಸೆಂಬರ್ 20) ಇಹಲೋಕ ತ್ಯಜಿಸಿದ್ದಾರೆ. ಐದು ಬಾರಿ ಹರಿಯಾಣದ ಮುಖ್ಯಮಂತ್ರಿಯಾಗಿದ್ದ ಚೌತಾಲಾ ಅವರು ಗುರುಗ್ರಾಮ್‌ನಲ್ಲಿರುವ ತಮ್ಮ ಮನೆಯಲ್ಲಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ. ಈ ವರ್ಷದ ಅಕ್ಟೋಬರ್ 5 ರಂದು ನಡೆದ ಹರಿಯಾಣ ವಿಧಾನಸಭಾ ಚುನಾವಣೆಯ ಮತದಾನದ ವೇಳೆ ಓಂ ಪ್ರಕಾಶ್ ಚೌತಾಲಾ ಕೊನೆಯ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು.

ಅವರು ಸಿರ್ಸಾದ ಚೌತಾಲಾ ಗ್ರಾಮದ ಮತಗಟ್ಟೆಯಲ್ಲಿ ಕಾಣಿಸಿಕೊಂಡಿದ್ದರು. ಭಾರತದ ಮಾಜಿ ಉಪಪ್ರಧಾನಿ ಚೌಧರಿ ದೇವಿ ಲಾಲ್ ಅವರ ಪುತ್ರ ಓಂ ಪ್ರಕಾಶ್ ಚೌತಾಲಾ ಅವರು ಹರಿಯಾಣದ ಏಳನೇ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು. ಅಭಯ್ ಸಿಂಗ್ ಚೌತಾಲಾ ಅವರು ಹರಿಯಾಣದ ಎಲೆನಾಬಾದ್ ಕ್ಷೇತ್ರದ ಶಾಸಕರಾಗಿದ್ದಾರೆ ಮತ್ತು ಅಕ್ಟೋಬರ್ 2014 ರಿಂದ ಮಾರ್ಚ್ 2019 ರವರೆಗೆ ಹರಿಯಾಣ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!