ಉದಯವಾಹಿನಿ, ಬಳ್ಳಾರಿ : ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್’ಡಿಬಿ)ಯ 2023-24ರ ಮುಖ್ಯ ಮಂತ್ರಿಗಳ ವಿವೇಚನಾ ನಿಧಿಯ ಒಂದು ಕೋಟಿ ರೂ ಅನುದಾನದಿಂದ ನಗರದ ಕನಕದುರ್ಗಮ್ಮ ದೇವಸ್ಥಾನ ಸಮೀಪದ ರೈಲ್ವೇ ಅಂಡರ್ ಪಾಸ್ ಕಾಮಗಾರಿಯು ಪ್ರಗತಿಯಲ್ಲಿದ್ದು.
ಸ್ಥಳಕ್ಕೆ ನಗರ ಶಾಸಕ ನಾರಾ ಭರತ್ ರೆಡ್ಡಿ ಭೇಟಿ ನೀಡಿ ಪರಿಶೀಲಿಸಿದರು. ರಸ್ತೆಗೆ ಕಾಂಕ್ರೀಟ್ ಹಾಕುವ ಕೆಲಸ ಭರದಿಂದ ಸಾಗಿರುವುದನ್ನು ವೀಕ್ಷಿಸಿ ತ್ವರಿತಗತಿಯಾಗಿ ಕಾಮಗಾರಿ ಕೈಗೊಳ್ಳಲು ಸಲಹೆ ನೀಡಿ. ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ, ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ತಿಳಿಸಿದರು.
