ಉದಯವಾಹಿನಿ , ಬೆಂಗಳೂರು :ನಿವೃತ್ತ ಸಿಬ್ಬಂದಿಗಳಿಗೆ ನೀಡಬೇಕಾಗಿದ್ದ ಬಾಕಿ ಉಪಧನ ಮತ್ತು ಗಳಿಕೆ ರಜೆ ನಗದೀಕರಣ ಮೊತ್ತ ರೂ.೨೨೪.೦೫ ಕೋಟಿ ಹಣ ಪಾವತಿಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ಹೇಳಿದರು.
೨೦೨೦ ರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ನಿವೃತ್ತ ಸಿಬ್ಬಂದಿಗಳಿಗೆ ನೀಡಬೇಕಾಗಿದ್ದ ಬಾಕಿ ಹಣವನ್ನು ಇಂದು ದಿನಾಂಕ ೨೧.೧೨.೨೦೨೪ ರಂದು ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು, ಕರಾರಸಾ ನಿಗಮದ ಕೇಂದ್ರ ಕಛೇರಿಯಲ್ಲಿ ಸಾಂಕೇತಿಕವಾಗಿ ಮೂವರಿಗೆ ಸಿಬ್ಬಂದಿಗಳಿಗೆ ಬಾಕಿ ಉಪಧನ ಹಾಗೂ ಗಳಿಕೆ ರಜೆ ನಗದೀಕರಣ ಮೊತ್ತದ ಚೆಕ್ ಅನ್ನು ವಿತರಿಸಿ, ?ನುಡಿದಂತೆ ನಡೆದಿದ್ದೇವೆ ಎಂಬುದನ್ನು ನಾವು ಮತ್ತೊಮ್ಮೆ ಸಾಬೀತುಪಡಿಸಿರುತ್ತೇವೆ ಎಂದು ತಿಳಿಸಿದರು. ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು ಮಾತನಾಡಿ, ಈ ಹಿಂದೆ ನೌಕರರ ಸಂಘಟನೆಗಳೊಂದಿಗೆ ನಡೆದ ಸಭೆಯಲ್ಲಿ ಅವರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಮಾತುಕತೆ ನಡೆಸಿ, ಅವುಗಳಲ್ಲಿ ಕೆಲವೊಂದು ಬೇಡಿಕೆಗಳನ್ನು ಈಡೇರಿಸುವುದಾಗಿ ನೀಡಿದ್ದ ಭರವಸೆಯಂತೆ, ಈ ಪೈಕಿ ನಾಲ್ಕು ಸಾರಿಗೆ ನಿಗಮಗಳ ೧೩೦೮ ಚಾಲನಾ ಮತ್ತು ತಾಂತ್ರಿಕ ಸಿಬ್ಬಂದಿಗಳ ಅಂತರ ನಿಗಮ ವರ್ಗಾವಣೆಯ ತಾತ್ಕಾಲಿಕ ಪಟ್ಟಿಯನ್ನು ಈಗಾಗಲೇ ಬಿಡುಗಡೆಗೊಳಿಸಲಾಗಿದೆ. ಹಾಗೂ ಎಲ್ಲಾ ೧೧೬೯೪ ನಿವೃತ್ತ ಸಿಬ್ಬಂದಿಗಳಿಗೆ ನೀಡಬೇಕಾಗಿದ್ದ ಬಾಕಿ ಉಪಧನ ಮತ್ತು ಗಳಿಕೆ ರಜೆ ನಗದೀಕರಣ ಮೊತ್ತವನ್ನು ಅಧಿವೇಶನದ ನಂತರ ಬಿಡುಗಡೆಗೊಳಿಸುವುದಾಗಿ ನೀಡಿದ್ದ ಭರವಸೆಯಂತೆ ಸರ್ಕಾರದ ಅಧಿಸೂಚನೆ ಸಂಖ್ಯೆ ಟಿಡಿ ೭೨ ಟಿಸಿಬಿ ೨೦೨೧(ಭಾ-೧), ದಿನಾಂಕ ೦೭.೧೨.೨೦೨೪ ರನ್ವಯ ಸರ್ಕಾರದಿಂದ ಅನುದಾನ ಬಿಡುಗಡೆಗೊಳಿಸಲಾಗಿತ್ತು.
