ಉದಯವಾಹಿನಿ, ಕುಷ್ಟಗಿ: ತಾಲ್ಲೂಕಿನ ದೊಣ್ಣೆ ಗುಡ್ಡ ಗ್ರಾಮದಲ್ಲಿ ದುರ್ಗಾದೇವಿ ದೇವಸ್ಥಾನದ ನೂತನ ಶಿಲಾಮಂಟಪ ಉದ್ಘಾಟನೆ ಡಿ.24ರಂದು ನಡೆಯಲಿದೆ. ಇದೇ ಸಂದರ್ಭದಲ್ಲಿ ಮಾತಂಗಿ ಮೂರ್ತಿ ಪ್ರತಿಷ್ಠಾಪನೆ ಮತ್ತು ಚಂಡಿ ಹೋಮ ಮತ್ತಿತರೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ವಿವಿಧ ಮಠಾಧೀಶರ ಸಾನ್ನಿಧ್ಯದಲ್ಲಿ ನಡೆಯುವ ಕಾರ್ಯಕ್ರಮವನ್ನು ಸಂಸದ ರಾಜಶೇಖರ ಹಿಟ್ನಾಳ ಉದ್ಘಾಟಿಸುವರು. ವಿಧಾನಸಭೆಯ ಪ್ರತಿಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು. ತುಂಗಭದ್ರಾ ಕಾಡಾ ಅಧ್ಯಕ್ಷ ಹಸನಸಾಬ್ ದೋಟಿಹಾಳ, ಮಾಜಿ ಶಾಸಕರಾದ ಕೆ.ಶರಣಪ್ಪ, ಅಮರೇಗೌಡ ಬಯ್ಯಾಪುರ ಇತರರು ಉಪಸ್ಥಿತರಿರುವರು.
