ಉದಯವಾಹಿನಿ, ನನಗೆ ಕನ್ನಡ ಗೊತ್ತಿಲ್ಲ ಆದರೆ. ತಮಿಳು ಚಿತ್ರರಂಗದ ಸ್ಮಾರ್ ನಟಿಯರಲ್ಲಿ ಒಬ್ಬರು. ತೆಲುಗಿನಲ್ಲೂ ನಟಿಸಿದ್ದಾರೆ. ನಟ ವಿಜಯ್, ಸೂರ್ಯ, ವಿಕ್ರಮ್, ಶಿವಕಾರ್ತಿಕೇಯನ್, ನಾನಿ, ಮಹೇಶ್ ಬಾಬು ಸೇರಿದಂತೆ ಸ್ಟಾರ್ ನಟರ ಜತೆ ತೆರೆ ಹಂಚಿಕೊಂಡಿದ್ದಾರೆ. ಕನ್ನಡದಲ್ಲಿ ಒಂದೇ ಒಂದು ಸಿನಿಮಾದಲ್ಲಿ ನಟಿಸದಿದ್ದರೂ ಪ್ಯಾನ್ ಇಂಡಿಯಾ ಪರಿಕಲ್ಪನೆ ಬಳಿಕ ಕೀರ್ತಿ ಸುರೇಶ್ ನಟನೆಯ ಡಬ್ಬಿಂಗ್ ಚಿತ್ರಗಳೂ ಕನ್ನಡದಲ್ಲೂ ಸದ್ದು ಮಾಡಿದ್ದು, ಆಕೆಯ ನಟನೆ ಮತ್ತು ಸೌಂದರ್ಯಕ್ಕೆ ಕನ್ನಡ ಪ್ರೇಕ್ಷಕರು ಸಹ ಫಿದಾ ಆಗಿದ್ದಾರೆ. ಸದ್ಯ ಬಾಲಿವುಡ್‌ಗೂ ಕೀರ್ತಿ ಸುರೇಶ್ ಕಾಲಿಟ್ಟಿದ್ದಾರೆ. ನಟ ವರುಣ್ ಧವನ್ ನಟನೆಯ ಬೇಬಿ ಜಾನ್ ಸಿನಿಮಾಗೆ ಕೀರ್ತಿ ನಾಯಕಿಯಾಗಿದ್ದಾರೆ. ಈ ಸಿನಿಮಾವನ್ನು ಖ್ಯಾತ ತಮಿಳು ನಿರ್ದೇಶಕ ಆಟ್ಲಿ ನಿರ್ದೇಶನ ಮಾಡಿದ್ದಾರೆ. ಇದು ಇಳಯದಳಪತಿ ವಿಜಯ್ ನಟನೆಯ ಸೂಪರ್ ಹಿಟ್ ತಮಿಳು ಸಿನಿಮಾ ಥೇರಿ ರಿಮೇಕ್ ಇದೇ ಡಿ.25ರಂದು ಅಂದರೆ ನಾಳೆ ಈ ಸಿನಿಮಾ ಬಿಡುಗಡೆಯಾಗಲಿದ್ದು, ಚಿತ್ರತಂಡ ಪ್ರಚಾರದಲ್ಲಿ ಬಿಜಿಯಾಗಿದೆ. ಸದ್ದ ಕೀರ್ತಿ ಸುರೇಶ್ ಮತ್ತು ವರುಣ್ ಧವನ್‌ಗೆ ಸಂಬಂಧಿಸಿದ ವಿಡಿಯೋವೊಂದು ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಕೀರ್ತಿ, ವರುಣ್ ಅವರಿಗೆ ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಯನ್ನು ಹೇಳಿಕೊಡುತ್ತಿದ್ದಾರೆ. ಐ ಲವ್ ಯು ಎಂಬುದನ್ನು ಈ ಮೂರು ಭಾಷೆಗಳಲ್ಲಿ ಕೀರ್ತಿ ಹೇಳಿಕೊಟ್ಟಿದ್ದು, ಅದನ್ನು ಹೇಳುವಾಗ ವರುಣ್ ಧವನ್ ತಡವರಿಸಿದರು.
