ಉದಯವಾಹಿನಿ, ನವದೆಹಲಿ: ದಿವಂಗತ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತಿತರ ಗಣ್ಯರು ನಮನ ಸಲ್ಲಿಸಿದ್ದಾರೆ. ವಾಜಪೇಯಿ ಅವರ ಜನಶತಮಾನೋತ್ಸವದ ಪ್ರಯುಕ್ತ ಅಟಲ್ ಸಾರಕದಲ್ಲಿ ನಡೆದ ಪ್ರಾರ್ಥನಾ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಪಾಲ್ಗೊಂಡಿದ್ದರು.
ಬಿಜೆಪಿಯ ಮಿತ್ರಪಕ್ಷಗಳಾದ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಮತ್ತು ಕೇಂದ್ರ ಸಚಿವರಾದ ಜೆಡಿಯುನ ಲಲನ್ ಸಿಂಗ್ ಮತ್ತು ಎಚ್‌ಎಎಂ(ಎಸ್)ನ ಜಿತಮ್ ರಾಮ್ ಮಾಂಝಿ ಸೇರಿದಂತೆ ಅಮಿತ್ ಶಾ ಮತ್ತು ಜೆಪಿ ನಡ್ಡಾ ಸೇರಿದಂತೆ ಕೇಂದ್ರ ಸಚಿವರು ಬಿಜೆಪಿ ಧೀಮಂತನಿಗೆ ನಮನ ಸಲ್ಲಿಸಿದರು.
ಉಪರಾಷ್ಟ್ರಪತಿ ಜಗದೀಪ್ ಧನಕರ್ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಜೊತೆಗೆ ವಾಜಪೇಯಿ ಅವರ ದತ್ತು ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.ವಾಜಪೇಯಿ ಅವರು ಸಾಂವಿಧಾನಿಕ ಮೌಲ್ಯಗಳನ್ನು ಹೇಗೆ ಕಾಪಾಡಿದರು ಮತ್ತು ದೇಶಕ್ಕೆ ಹೊಸ ದಿಕ್ಕು ಮತ್ತು ಆವೇಗವನ್ನು ಹೇಗೆ ನೀಡಿದರು ಎಂಬುದರ ಪರಿಣಾಮ ಶಾಶ್ವತವಾಗಿ ಉಳಿಯುತ್ತದೆ ಎಂದು ಮೋದಿ ಎಕ್‌್ಸನಲ್ಲಿ ಪೋಸ್ಟ್ ಮಾಡಿದ್ದಾರೆ.
