ಉದಯವಾಹಿನಿ, ಅನಾರೋಗ್ಯದಿಂದ ಬಳಲುತ್ತಿರುವ ನಟ ಶಿವರಾಜ್ಕುಮಾರ್ ಅಮೆರಿಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅವರು ಈಗ ಸ್ಥಿರ ಪರಿಸ್ಥಿತಿಯಲ್ಲಿ ಇದ್ದು ಚೇತರಿಸಿಕೊಳ್ಳುತ್ತಿದ್ದಾರೆ ವೈದ್ಯರು ಮಾಹಿತಿ ನೀಡಿದ್ದಾರೆ. ವೈದ್ಯರ ಜೊತೆ ಶಿವರಾಜ್‌ಕುಮಾರ್ ಪತ್ನಿ ಗೀತಾ ಹಾಗೂ ಭಾವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಅಮೇರಿಕಾದ ಮಿಯಾಮಿ ಕ್ಯಾನ್ಸರ್ ಇನ್ಸಿಟ್ಯೂಟ್‌ನಲ್ಲಿ ಶಿವಣ್ಣ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಾ. ಮುರುಗೇಶ ಮನೋಹರನ್ ಅವರ ಮಾರ್ಗದರ್ಶನದಲ್ಲಿ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನೆರವೇರಿಸಲಾಗಿದೆ. ಶೀಘ್ರದಲ್ಲೇ ಶಿವಣ್ಣ ಚೇತರಿಸಿಕೊಂಡು ವೀಡಿಯೋ ಮಾಡಿ ಅಭಿಮಾನಿಗಳ ಜೊತೆ ಮಾತನಾಡಲಿದ್ದಾರೆ. ಅಭಿಮಾನಿಗಳು, ಆಪ್ತರು ಮತ್ತು ಮಾಧ್ಯಮಗಳಿಗೆ ಈ ಸಂದರ್ಭದಲ್ಲಿ ತೋರಿಸಿದ ನಿರಂತರ ಬೆಂಬಲ, ಪ್ರಾರ್ಥನೆ ಮತ್ತು ಮೆಚ್ಚುಗೆ ಸಂದೇಶಗಳಿಗೆ ಹೃತ್ತೂರ್ವಕ ಧನ್ಯವಾದಗಳನ್ನು ತಿಳಿಸುತ್ತೇವೆ. ನಿಮ್ಮ ಪ್ರೋತ್ಸಾಹವು ಡಾ. ಶಿವರಾಜ್‌ಕುಮಾರ್ ಮತ್ತು ಅವರ ಕುಟುಂಬಕ್ಕೆ ದೊಡ್ಡ ಶಕ್ತಿ ಎಂದು ಗೀತಾ ಶಿವರಾಜ್‌ಕುಮಾರ್ ಹೇಳಿದ್ದಾರೆ.
