ಉದಯವಾಹಿನಿ, ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಪಂಚ ಗ್ಯಾರಂಟಿಗಳ ಜೊತೆಗೆ ಆತಹತ್ಯೆಯ ಭಾಗ್ಯವನ್ನೂ ಕರುಣಿಸಿ ನತದೃಷ್ಟ ಕುಟುಂಬಗಳನ್ನು ಅನಾಥವಾಗಿಸಲು ಹೊರಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್‌್ಸನಲ್ಲಿ ಪೋಸ್ಟ್ ಮಾಡಿರುವ ಅವರು, ಕಲಬುರಗಿ ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್ ರಾಜು ಕಪನೂರು ವಿರುದ್ಧ ಹಣಕ್ಕೆ ಬೇಡಿಕೆ, ಕೊಲೆ ಬೆದರಿಕೆಯಂತಹ ಗಂಭೀರ ಆರೋಪಗಳನ್ನು ಮಾಡಿ, ಗುತ್ತಿಗೆದಾರನೊಬ್ಬ ಆತಹತ್ಯೆಗೆ ಶರಣಾಗಿರುವ ಘಟನೆ ಕುರಿತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಸರ್ಕಾರದಲ್ಲಿ ಕೆಲವು ಮಂತ್ರಿಗಳು ತಮ ಬಲಗೈ ಬಂಟರು ಹಾಗೂ ಆಪ್ತ ಸಹಾಯಕರಿಗೆ ಜನರಲ್ ಪವರ್ ಆಫ್ ಅಟಾರ್ನಿ ನೀಡಿದಂತಿದೆ. ಇತ್ತೀಚೆಗಷ್ಟೇ ಸಚಿವೆ ಲಕ್ಷೀ ಹೆಬ್ಬಾಳ್ಕರ್ ಅವರ ಆಪ್ತಸಹಾಯಕನ ಕಿರುಕುಳಕ್ಕೆ ತಹಸೀಲ್ದಾರ್ ಕಚೇರಿಯ ಎಸ್ಡಿಎ ರುದ್ರೇಶ್ ಆತಹತ್ಯೆ, ಇದರ ಬೆನ್ನಲ್ಲೇ ವಿಧಾನ ಮಂಡಲದ ಸುವರ್ಣ ಸೌಧಕ್ಕೆ ನುಗ್ಗಿ ಶಾಸಕರಾದ ಸಿ.ಟಿ.ರವಿ ಅವರ ಮೇಲೆ ಗೂಂಡಾಗಿರಿ ಪ್ರದರ್ಶಿಸಿದ್ದ ಸುದ್ದಿ ಹಸಿಯಾಗಿರುವಾಗಲೇ ಇಂದು ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರನ ಕಿರುಕುಳ ಹಾಗೂ ಬೆದರಿಕೆಯಿಂದ ತತ್ತರಿಸಿದ್ದ ಬೀದರ್ ನ ಗುತ್ತಿಗೆದಾರ ಸಚಿನ್ ಸುದೀರ್ಘ ಪತ್ರ ಬರೆದು ಆತಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!