ಉದಯವಾಹಿನಿ, ನವದೆಹಲಿ: ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅವರ ಸಾರಕಕ್ಕೆ ಭೂಮಿ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಸಾರಕಕ್ಕೆ ಕೇಂದ್ರ ಸರ್ಕಾರ ಶೀಘ್ರವೇ ಸ್ಥಳ ಹಂಚಿಕೆ ಮಾಡಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಕಟಿಸಿದ್ದಾರೆ.
ಕೇಂದ್ರ ಸಂಪುಟ ಸಭೆಯ ಬಳಿಕ ಶನಿವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಈ ವಿಷಯವನ್ನು ತಿಳಿಸಿದ್ದಾರೆ. ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಈ ಬಗ್ಗೆ ಹೇಳಿಕೆ ನೀಡಿ, ಅಂತ್ಯಕ್ರಿಯೆ ಮತ್ತುಇತರ ವಿಧಿವಿಧಾನಗಳು ಮುಂದುವರಿಸಬಹುದು. ಏಕೆಂದರೆ ಟ್ರಸ್ಟ್ ರಚನೆ ಮತ್ತು ಜಾಗ ಹಂಚಿಕೆಯಾಗಬೇಕಿದೆ ಎಂದು ಸ್ಪಷ್ಟಪಡಿಸಿದೆ.
ಕಾಂಗ್ರೆಸ್ ಮುಖ್ಯಸ್ಥರಿಂದ ಮನಮೋಹನ್ ಸಿಂಗ್ ಅವರ ಸಾರಕಕ್ಕಾಗಿ ಜಾಗವನ್ನು ಮಂಜೂರು ಮಾಡುವಂತೆ ಮನವಿ ಬಂದಿದ್ದು, ಈ ಮನವಿಯನ್ನು ಸ್ವೀಕರಿಸಲಾಗಿದೆ. ಸಚಿವ ಸಂಪುಟ ಸಭೆಯ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಾರಕ ನಿರ್ಮಾಣಕ್ಕಾಗಿ ಜಾಗವನ್ನು ಮಂಜೂರು ಮಾಡಲಿದ್ದಾರೆಂದು ತಿಳಿಸಿದೆ.
ಸಾರಕಕ್ಕಾಗಿ ಟ್ರಸ್ಟ್ ರಚನೆ ಮತ್ತು ಜಾಗದ ಹಂಚಿಕೆಯನ್ನು ಅಂತಿಮಗೊಳಿಸಿರುವುದರಿಂದ, ಅಂತ್ಯಕ್ರಿಯೆ ಮತ್ತು ಔಪಚಾರಿಕತೆಗಳು ಈ ಮಧ್ಯೆ ಮುಂದುವರಿಯಬಹುದು ಎಂದು ಗೃಹ ಸಚಿವಾಲಯ ಹೇಳಿದೆ.

ಮುಂಜಾನೆ ಮಾಜಿ ಪ್ರಧಾನಿ ದಿವಂಗತ ಡಾ.ಮನಮೋಹನ ಸಿಂಗ್ ಅವರ ಸಾರಕಕ್ಕೆ ಜಾಗ ಹಂಚಿಕೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಅಧ್ಯಕ್ಷರಿಂದ ಮನವಿ ಮಾಡಿಕೊಂಡ ಸಂಬಂಧ ಅಮಿತ್ ಶಾ ಅವರು ಮಲ್ಲಿಕಾರ್ಜುನ ಖರ್ಗೆಯವರಿಗೆ ಮತ್ತು ಡಾ.ಮನಮೋಹನ ಸಿಂಗ್ ಅವರ ಕುಟುಂಬಕ್ಕೆ ಮಾಹಿತಿ ನೀಡಿ, ಸಾರಕಕ್ಕೆ ಜಾಗ ಹಂಚಿಕೆ ಮಾಡುವುದಾಗಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!