ಉದಯವಾಹಿನಿ, ಬೆಂಗಳೂರು: ಬಿಜೆಪಿಯವರು ತಮ ವಿರುದ್ಧ ಹಾರಾಡಿ, ಚೀರಾಡಿ, ಬಟ್ಟೆ ಹರಿದುಕೊಂಡರೂ ತಾವು ತಲೆಕೆಡಿಸಿಕೊಳ್ಳುವುದಿಲ್ಲ ಯಾರಿಗೇ ದೂರು ನೀಡಿದರೂ ಹೆದರುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ತಾವು ಸೈದ್ಧಾಂತಿಕವಾಗಿ ಅವರನ್ನು ವಿರೋಧಿಸುತ್ತೇವೆ. ಮನಸತಿ, ಆರ್ಎಸ್ಎಸ್ ಚಿಂತನೆಗಳಿಗೆ ಎದುರಾಗಿದ್ದೇವೆ ಎಂಬ ಕಾರಣಕ್ಕೆ ನನ್ನ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ. ಇಂತಹುದಕ್ಕೆಲ್ಲಾ ನಾವು ಜಗ್ಗುವುದಿಲ್ಲ. ಎಷ್ಟೇ ಬೆದರಿಕೆ ಹಾಕಿದರೂ ತಮ ನಿಲುವುಗಳು ಬದಲಾಗುವುದಿಲ್ಲ ಎಂದರು.
ಮೂರು ಬಾರಿ ಸಚಿವನಾಗಿದ್ದೇನೆ. ಇಷ್ಟು ವರ್ಷ ರಾಜಕೀಯ ಜೀವನದಲ್ಲಿ ಒಂದು ರೂಪಾಯಿ ಭ್ರಷ್ಟಾಚಾರ ಮಾಡಿಲ್ಲ. ನನ್ನ ವಿರುದ್ಧ ಆದಾಯ ತೆರಿಗೆ, ಸಿಬಿಐ, ಜಾರಿ ನಿರ್ದೇಶನಾಲಯ ಸೇರಿದಂತೆ ಯಾವುದೇ ಸಂಸ್ಥೆಗೆ ದೂರು ನೀಡಲಿ. ಅಮಿತ್ ಶಾ, ಪ್ರಧಾನಿ ಮೋದಿಯವರಿಗೂ ಹೇಳಲಿ. ನಾವು ಯಾವುದಕ್ಕೂ ಹೆದರುವುದಿಲ್ಲ. ತಮ ತಂದೆ ಮಲ್ಲಿಕಾರ್ಜುನ ಖರ್ಗೆ ಎಷ್ಟು ದೃಢವಾಗಿದ್ದರೋ, ನಾನೂ ಕೂಡ ಹಾಗೆಯೇ ಇರುತ್ತೇನೆ ಎಂದು ಹೇಳಿದರು. ನನ್ನ ಆಪ್ತ ಎಂದು ಹೇಳಿರುವ ವ್ಯಕ್ತಿಯಿಂದ ಕಿರುಕುಳವಾಗಿದೆ ಎಂದು ವ್ಯಕ್ತಿಯೊಬ್ಬ ಆತಹತ್ಯೆ ಮಾಡಿಕೊಂಡಿರುವ ಪ್ರಕರಣವನ್ನು ಮುಂದಿಟ್ಟುಕೊಂಡು ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ಆ ರೀತಿಯ ಘಟನೆ ಆಗಿರಬಹುದು. ನಾನು ಇಲ್ಲ ಎಂದು ಹೇಳುತ್ತಿಲ್ಲ. ಇದರ ತನಿಖೆಗೂ ನಾನು ವಿರೋಧ ವ್ಯಕ್ತಪಡಿಸುತ್ತಿಲ್ಲ. ತನಿಖೆಯಾಗಲಿ ಎಂದೇ ನಾನು ಹೇಳುತ್ತಿದ್ದೇನೆ. ಆದರೂ ನನ್ನ ವಿರುದ್ಧ ಅನಗತ್ಯವಾಗಿ ಟೀಕೆ ಮಾಡುತ್ತಿರುವುದೇಕೆ ಎಂದು ಪ್ರಶ್ನಿಸಿದರು.
