ಉದಯವಾಹಿನಿ, ನವದೆಹಲಿ: ಸಂವಿಧಾನವೇ ನಮ ಮಾರ್ಗದರ್ಶಕ ಬೆಳಕು. ಇಂದು ಭಾರತದ ಸಂವಿಧಾನವು ಕಾಲದ ಪರೀಕ್ಷೆಯಲ್ಲಿ ನಿಂತಿದೆ ಎಂದು ಪ್ರಧಾನಿ ನರೇಂದ್ರಮೋದಿ ಹೇಳಿದರು. ಇಂದು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್‌ ಕಿ ಬಾತ್‌ನ 117ನೇ ಸಂಚಿಕೆಯನ್ನು ಉದ್ದೇಶಿಸಿ ಮಾತನಾಡಿದ ಅವರು, 2025ರ ಜನವರಿ 26ರಂದು ನಮ ಸಂವಿಧಾನವು 75 ವರ್ಷಗಳನ್ನು ಪೂರೈಸುತ್ತಿದೆ. ಇದು ನಮಗೆಲ್ಲರಿಗೂ ಹೆಮೆಯ ವಿಷಯ ಎಂದರು.
ಸಂವಿಧಾನ ತಯಾರಕರು ನಮಗೆ ಹಸ್ತಾಂತರಿಸಿದ ಸಂವಿಧಾನವು ನಮಗೆ ಮಾರ್ಗದರ್ಶಕ ಬೆಳಕು ಮತ್ತು ನಮಗೆ ಮಾರ್ಗದರ್ಶನ ಮಾಡುತ್ತಿದೆ ಎಂದು ಹೇಳಿದರು.ಇದರ ಗೌರವಾರ್ಥವಾಗಿ ಸಂವಿಧಾನ ಪೀಠಿಕೆಯನ್ನು ಓದಲು ಮತ್ತು ವೀಡಿಯೊಗಳನ್ನು ಹಂಚಿಕೊಳ್ಳಲು ನಾಗರಿಕರಿಗೆ ಅವಕಾಶ ಕಲ್ಪಿಸಲಾಗಿದೆ.
ಇದರಲ್ಲಿ, ನೀವು ಸಂವಿಧಾನದ ಪೀಠಿಕೆಯನ್ನು ಓದುವ ಮೂಲಕ ನಿಮ ವೀಡಿಯೊವನ್ನು ಅಪ್‌ಲೋಡ್‌ ಮಾಡಬಹುದು. ನೀವು ವಿವಿಧ ಭಾಷೆಗಳಲ್ಲಿ ಸಂವಿಧಾನವನ್ನು ಓದಬಹುದು ಮತ್ತು ಸಂವಿಧಾನದ ಬಗ್ಗೆ ಪ್ರಶ್ನೆಗಳನ್ನು ಕೇಳಬಹುದು ಎಂದರು.
ಶಾಲಾ-ಕಾಲೇಜಿಗೆ ಹೋಗುವ ಮಕ್ಕಳು, ಕಾಲೇಜಿಗೆ ಹೋಗುವ ಯುವಕರು, ಮನ್‌ಕೀ ಬಾತ್‌ ಕೇಳುಗರು, ದೇಶದ ನಾಗರಿಕರು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಅದರ ಭಾಗವಾಗಬೇಕು ಎಂದು ಪ್ರಧಾನಿ ಮನವಿ ಮಾಡಿದರು.
ಜನವರಿ 13ರಿಂದ ಪ್ರಯಾಗರಾಜ್‌ನಲ್ಲಿ ನಡೆಯಲಿರುವ ಮಹಾಕುಂಭದ ಮಹತ್ವವನ್ನು ಎತ್ತಿ ಹಿಡಿದ ಮೋದಿ, ಈ ಬೃಹತ್‌ ಧಾರ್ಮಿಕ ಕಾರ್ಯಕ್ರಮವು ಏಕತೆಯ ಸಂದೇಶವನ್ನು ನೀಡುತ್ತದೆ ಮತ್ತು ಈ ಬಾರಿ ದೇಶ ಮತ್ತು ಪ್ರಪಂಚದಾದ್ಯಂತದ ಭಕ್ತರು ಪ್ರಯಾಗರಾಜ್‌ನಲ್ಲಿ ಡಿಜಿಟಲ್‌ ಮಹಾಕುಂಭಕ್ಕೆ ಸಾಕ್ಷಿಯಾಗಲಿದ್ದಾರೆ ಎಂದು ಹೇಳಿದರು.

 

Leave a Reply

Your email address will not be published. Required fields are marked *

error: Content is protected !!