ಉದಯವಾಹಿನಿ,ಬೆಂಗಳೂರು: ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಜೂನ್.12, 2023ರಿಂದ ಆರಂಭಗೊಳ್ಳುತ್ತಿವೆ. ಈ ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಕೆ ಎಸ್ ಆರ್ ಟಿ ಸಿ ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣಿಸಲು ಅವಕಾಶ ನೀಡಿ ಗುಡ್ ನ್ಯೂಸ್ ನೀಡಿದೆ.ಈ ಕುರಿತಂತೆ ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಾಹಿತಿ ನೀಡಿದೆ. ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಗಳು ದಿನಾಂಕ 12-06-2023ರಿಂದ 19-06-2023ರವರೆಗೆ ನಡೆಯಲಿವೆ ಎಂದಿದೆ.ವಿದ್ಯಾರ್ಥಿಗಳ ಹಿತದೃಷ್ಠಿಯಿಂದ, ನಿಗಮವು ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ, ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿರುವುದಾಗಿ ತಿಳಿಸಿದೆ.
